ಉಡುಪಿ ಮೂಲದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿಗಳು ಸೋಮವಾರ ಹಲ್ಲೆ ನಡೆಸಿದ್ದಾರೆ.
ಮಂಗಳೂರು: ಉಡುಪಿ ಮೂಲದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿಗಳು ಸೋಮವಾರ ಹಲ್ಲೆ ನಡೆಸಿದ್ದಾರೆ.
ಭಾಸ್ಕರ ಶೆಟ್ಟಿ ಅವರ ಪುತ್ರ, ಆರೋಪಿ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಬಜಿಲಕೇರಿ ಧನರಾಜ್ ನೇತೃತ್ವದ ತಂಡ ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ನಿರಂಜನ್ ಭಟ್ ಮತ್ತು ನವನೀತ್ ಶೆಟ್ಟಿಯನ್ನು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2006ರ ಜುಲೈನಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಮತ್ತು ಜ್ಯೋತಿಷಿ ನಿರಂಜನ ಭಟ್ ಸೇರಿ ಕೊಲೆ ಮಾಡಿ
ಬಳಿಕ ಹೋಮಕುಂಡದಲ್ಲಿ ಅವರ ಶವವನ್ನು ದಹಿಸಿದ್ದರು.