
ಬೆಂಗಳೂರು(ಮೇ.07): ಸಿದ್ದರಾಮಯ್ಯ ಅವರ ಆಪ್ತರೆನಿಸಿದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಸಾರಥ್ಯ ವಹಿಸಿದ್ದಾರೆ. ಶನಿವಾರ ಸಂಜೆ ಕೆಂಗೇರಿಯಲ್ಲಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದ ಇಬ್ರಾಹಿಂ ಅವರು ಸುಮಾರು ಎರಡು ತಾಸುಗಳವರೆಗೂ ಮಾತುಕತೆ ನಡೆಸಿದರು.
ಇದಾದ ನಂತರ ನೇರವಾಗಿ ಅವರು ಕೆ.ಆರ್ ನಗರಕ್ಕೆ ಸಂಚಾರ ಬೆಳೆಸಿ ತಡರಾತ್ರಿವರೆಗೂ ಕಾಂಗ್ರೆಸ್ ತೊರೆಯಲು ಸಜ್ಜಾಗಿರುವ ಮಾಜಿ ಸಂಸದ ವಿಶ್ವನಾಥ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಎಲ್ಲಾ ಬೆಳವಣಿಗೆಗಳು ಮಂಗಳವಾರದ ಕುಮಾರಸ್ವಾಮಿ ಅವರ ಭೇಟಿಯ ಕುರಿತೇ ಆಗಿತ್ತು. ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರೊಂದಿಗಿನ ಮಂಗಳವಾರದ ಭೇಟಿಯ ನಂತರ ಮಹತ್ವದ ಬೆಳವಣಿಗೆಗಳು ನಡೆಯಲಿದ್ದು, ಹಲವು ಕಾಂಗ್ರೆಸ್ ಶಾಸಕರು ಜೆಡಿಎಸ್‌ನತ್ತ ಮುಖ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.