ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಮೇಲುಗೈ?

Published : Jan 21, 2017, 02:19 PM ISTUpdated : Apr 11, 2018, 12:36 PM IST
ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಮೇಲುಗೈ?

ಸಾರಾಂಶ

ಬಿಜೆಪಿ ಕಾರ್ಯಕಾರಿಣಿಯಲ್ಲಿ   ಡಿ.ವಿ. ಸದಾನಂದಗೌಡ ಸೇರಿದಂತೆ ಘಟಾನುಘಟಿ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಪಕ್ಷದಲ್ಲಿ   ಭುಗಿಲೆದ್ದಿರುವ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಪಕ್ಷದಲ್ಲಿ ಗೊಂದಲಗಳು ಇದ್ದದ್ದು ನಿಜ. ಈ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದ್ದು  ಒಂದೇ ದಿನದಲ್ಲಿ  ಸಮಸ್ಯೆ ಬಗೆಹರಿಸ್ತೇವೆ ಎಂದು ಹೇಳಿದ್ದಾರೆ. 

ಕಲಬುರಗಿ (ಜ.21): ಭಿನ್ನಮತದ ಬೇಗುದಿಯಲ್ಲಿರುವ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ಇಂದು ಕಲಬುರಗಿಯಲ್ಲಿ ನಡೆಯಿತು.

ಶಿಸ್ತಿನ ಪಕ್ಷ ಎಂದೇ ಹೆಸರಾಗಿದ್ದ ಬಿಜೆಪಿ ಇದೀಗ ಒಡೆದ ಮನೆಯಾಗಿದ್ದು ಜಿಲ್ಲಾ ಹಂತದ ಸಭೆಗಳಲ್ಲಿಯೇ ಸಾಕಷ್ಟು ಗಲಾಟೆ ನಡೆಯುತ್ತಿರುವ ಈ ಹಂತದಲ್ಲಿ ರಾಜ್ಯ ಕಾರ್ಯಕಾರಿಣಿ ಗಮನ ಸೆಳೆಯಿತು.

‌ಮೇಲ್ನೋಟಕ್ಕೆ ಕಾರ್ಯಕಾರಿಣಿಯಲ್ಲಿ  ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಂತೆ ಕಂಡಿತು. ಬ್ರಿಗೇಡ್ ಮೂಲಕ ಬಂಡಾಯ ಸಾರಿರುವ ನಾಯಕ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರದ್ದು ಹಿತ್ತಾಳೆ ಕಿವಿ ಅಂತ ಜರಿದಿದ್ದ ಎಂಎಲ್'ಸಿ ಸೋಮಣ್ಣ ಕೂಡ ಕಾರ್ಯಕಾರಣಿಗೆ ಆಗಮಿಸಿದ್ದರು.

ಬಿಜೆಪಿ ಕಾರ್ಯಕಾರಿಣಿಯಲ್ಲಿ   ಡಿ.ವಿ. ಸದಾನಂದಗೌಡ ಸೇರಿದಂತೆ ಘಟಾನುಘಟಿ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಪಕ್ಷದಲ್ಲಿ   ಭುಗಿಲೆದ್ದಿರುವ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಪಕ್ಷದಲ್ಲಿ ಗೊಂದಲಗಳು ಇದ್ದದ್ದು ನಿಜ. ಈ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದ್ದು  ಒಂದೇ ದಿನದಲ್ಲಿ  ಸಮಸ್ಯೆ ಬಗೆಹರಿಸ್ತೇವೆ ಎಂದು ಹೇಳಿದ್ದಾರೆ. 

ನೂರಾರು  ಬಿಜೆಪಿ ಕಾರ್ಯಕರ್ತರು ಈಶ್ವರಪ್ಪರನ್ನು ಮನವೊಲಿಸಿ, ಇಲ್ಲವೇ ಪಕ್ಷದಿಂದ ಕಿತ್ತು ಹಾಕಿ ಎಂದು ಘೋಷಣೆ ಕೂಗಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ವಿರೋಧದ ಮಧ್ಯೆ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಶಂಕು