
ಪಾಟ್ನಾ, [ಡಿ.09]: ಒಂದೇ ದಿನದಲ್ಲಿ ಸಪ್ತಪದಿ ತುಳಿಯಬೇಕಿದ್ದ ನಿವೃತ್ತ ಐಜಿಪಿ ಪುತ್ರಿ ಅಕಾಲಿಕ ಮೃತ್ಯುವಿಗೆ ತುತ್ತಾಗಿರುವ ಘಟನೆ ಬಿಹಾರಾದ ಪಾಟ್ನಾದಲ್ಲಿ ನಡೆದಿದೆ.
ಆ ನಿವೃತ್ತ ಐಜಿಪಿ ಮಗಳು ವಾಸವಾಗಿದ್ದ 14ನೇ ಮಹಡಿಯಿಂದ ಜಿಗಿದು ಪ್ರಾಣ ಬಿಟ್ಟಿದ್ದು, ಇದ್ರಿಂದ ಬಿಹಾರದ ನಿವೃತ್ತ ಐಜಿಪಿ ಉಮಾಶಂಕರ್ ಸುಧಾಂಶು ಅವರ ಪುತ್ರಿಯ ಅದ್ಧೂರಿ ಮದುವೆ ಈಗ ಕನಸಾಗಿಯೇ ಉಳಿದಿದೆ.
ಇನ್ನು ಆಕೆಯ ಸಾವು ಆತ್ಮಹತ್ಯೆ ಎಂದು ಕುಟುಂಬದವರು ಹೇಳುತ್ತಿದ್ದಾರೆ. ಆದರೆ ಐಜಿಪಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆಟ್ನೋಟ್ ಸೇರಿದಂತೆ ಸಾವಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯೂ ಪೊಲೀಸರಿಗೆ ಸಿಕ್ಕಿಲ್ಲ.
ಕೂಡಲೇ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ