
ಬೆಂಗಳೂರು (ಫೆ.11): ಮನೆಯ ಕಾಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜೆಪಿ ನಗರದ 5 ನೇ ಹಂತದಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳು 27 ರ ಮಧ್ಯರಾತ್ರಿ ಆರ್ ಎಕ್ಸ್ KA 28 L4509 ನಂಬರ್ ಬೈಕ್ ಕಳ್ಳತನವಾಗಿತ್ತು. ಮಧ್ಯರಾತ್ರಿ 1-32 ರ ವೇಳೆ ಒಂದು ನಿಮಿಷ ಕಾಲ ಹೊಂಚು ಹಾಕಿ ಕೃತ್ಯ ನಡಿಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಬೈಕ್ ಮಾಲೀಕ ನಪನಂದ ಮನು ಚಂಗಪ್ಪ ಜೆಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿಯನಕ ಬೈಕ್ ಕಳ್ಳನ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕಳ್ಳನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.