ಮತ್ತೊಂದು ದೇಶದ ಮೇಲೆ ದಾಳಿ ಮಾಡೋ ಪಾಪಿಗಳು ನಮ್ಮಲ್ಲೇಕಿದ್ದಾರೆ?:ಬಿಲಾವಲ್!

Published : Mar 15, 2019, 03:14 PM IST
ಮತ್ತೊಂದು ದೇಶದ ಮೇಲೆ ದಾಳಿ ಮಾಡೋ ಪಾಪಿಗಳು ನಮ್ಮಲ್ಲೇಕಿದ್ದಾರೆ?:ಬಿಲಾವಲ್!

ಸಾರಾಂಶ

ಇಮ್ರಾನ್ ಖಾನ್ ಮೇಲೆ ಮುಗಿಬಿದ್ದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ| ಇಮ್ರಾನ್ ಖಾನ್ ನಿದ್ದೆಗೆಡಿಸಿದ ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿಕೆ| 'ಮತ್ತೊಂದು ದೇಶದ ಮೇಲೆ ದಾಳಿ ಮಾಡುವ ಭಯೋತ್ಪಾದಕರು ನಮ್ಮಲ್ಲೇಕಿದ್ದಾರೆ'?| ಭಯೋತ್ಪಾದಕರಿಗೆ ಪಾಕ್ ನೆಲ ಬಳಸಿಕೊಳ್ಳಲು ಅವಕಾಶ ಕೊಡಬೇಡಿ ಎಂದ ಬಿಲಾವಲ್|

ಇಸ್ಲಾಮಾಬಾದ್(ಮಾ.15): ಪುಲ್ವಾಮಾ ದಾಳಿ ಬಳಿಕ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ನಿದ್ದೆಯೇ ಮರೆತು ಹೋಗಿದೆ. ಒಂದು ಕಡೆ ಭಾರತ ಸೇನಾ ಕಾರ್ಯಾಚರಣೆಗಳ ಮೂಲಕ ಪಾಠ ಕಲಿಸುತ್ತಿದ್ದರೆ, ಮತ್ತೊಂದು ಕಡೆ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸುವಂತೆ ವಿಶ್ವ ಸಮುದಾಯ ಒತ್ತಡ ಹೇರುತ್ತಲೇ ಇದೆ.

ಈ ಮಧ್ಯೆ ಪಾಕಿಸ್ತಾನದಲ್ಲೂ ಇಮ್ರಾನ್ ಖಾನ್ ಮುಖಭಂಗಕ್ಕೀಡಾಗುತ್ತಿದ್ದು, ಅಲ್ಲಿನ ರಾಜಕೀಯ ಪಕ್ಷಗಳು, ನಾಯಕರು ಇದೀಗ ಇಮ್ರಾನ್ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದ್ದಾರೆ.

ಮತ್ತೊಂದು ದೇಶದ ಮೇಲೆ ದಾಳಿ ಮಾಡುವ ಭಯೋತ್ಪಾದಕ ಗುಂಪುಗಳು ಪಾಕಿಸ್ತಾನದಲ್ಲಿ ಆಶ್ರಯ ಏಕೆ ಪಡೆಯುತ್ತಿವೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ ಪಾಕ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಬೇರೊಂದು ದೇಶದ ಮೇಲೆ ದಾಳಿ ಮಾಡಲು ಭಯೋತ್ಪಾದಕರು ಪಾಕ್ ನೆಲವನ್ನು ಬಳಸಿಕೊಳ್ಳುತ್ತಿದ್ದು, ಇದರ ವಿರುದ್ಧ ಪಾಕ್ ಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಲಾವಲ್ ಹರಿಹಾಯ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..
ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ