ಭಯೋತ್ಪಾದನಾ ವಿರೋಧಿ ತಿದ್ದುಪಡಿ ಮಸೂದೆ ಅಂಗೀಕಾರ!

By Web DeskFirst Published Jul 24, 2019, 6:30 PM IST
Highlights

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ| ಕಾನೂನು ಬಾಹಿರ ಚಟುವಟಿಕೆಗಳ ತಿದ್ದುಪಡಿ ವಿಧೇಯಕ ಅಸ್ತು| ಲೋಕಸಭೆಯಲ್ಲಿ ಯುಎಪಿಎ ತಿದ್ದುಪಡಿ ಮಸೂದೆ ಅಂಗೀಕಾರ| ಭಯೋತ್ಪಾದಕರೊಡನೆ ಸಂಪರ್ಕ ಹೊಂದಿರುವ ವ್ಯಕ್ತಿ ಉಗ್ರವಾದಿ ಎಂದು ಘೋಷಣೆ| ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ| ಯುಎಪಿಎ ತಿದ್ದುಪಡಿ ಮಸೂದೆ ವಿರೋಧಿಸಿದ್ದ ಕಾಂಗ್ರೆಸ್|

ನವದೆಹಲಿ(ಜು.23): ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಕಾನೂನು ಬಾಹಿರ ಚಟುವಟಿಕೆಗಳ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ.

ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಯೋತ್ಪಾದನಾ ವಿರೋಧಿ ಕಾನೂನಿನ ತಿದ್ದುಪಡಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಯುಎಪಿಎ ತಿದ್ದುಪಡಿ ಮಸೂದೆ ಜಾರಿಯಿಂದ ಕಾನೂನು ಜಾರಿ ಸಂಸ್ಥೆಗಳನ್ನು ಭಯೋತ್ಪಾದಕರಿಗಿಂತ ಒಂದು ಹೆಜ್ಜೆ ಮುಂದಿಡಲು ಸಹಾಯಕವಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Home Min Amit Shah in LS on Unlawful Activities (Prevention) Amendment Act Bill: There's a need for a provision to declare an individual as a terrorist, UN has a procedure for it, US has it, Pakistan has it, China has it, Israel has it, European Union has it, everyone has done it pic.twitter.com/lJMSbFe6L5

— ANI (@ANI)

ಇದೇ ವೇಳೆ ಭಯೋತ್ಪಾದನಾ ವಿರೋಧಿ ಕಾನೂನುಗಳ ದುರುಪಯೋಗ ಸಾಧ್ಯವಿಲ್ಲ ಎಂದಿರುವ ಅಮಿತ್ ಶಾ, ಯಾವುದೇ ಕಾರಣಕ್ಕೂ ಭಯೋತ್ಪಾದನೆ ಚಿಗುರೊಡೆಯಲು ನಾವು ಬಿಡುವುದಿಲ್ಲ ಎಂದು ಗೃಹಸ ಸಚಿವರು ಸ್ಪಷ್ಟಪಡಿಸಿದರು.

ಯುಎಪಿಎ ಕಾನೂನು ಜಾರಿಯಿಂದಾಗಿ ಭಯೋತ್ಪಾದಕರೊಡನೆ ಸಂಪರ್ಕ ಹೊಂದಿದೆವರೆಂದು  ಶಂಕಿಸಲಾಗಿರುವ ವ್ಯಕ್ತಿಯನ್ನು ಉಗ್ರವಾದಿ ಎಂದು ಘೋಷಿಸುವ ಅಧಿಕಾರ ಸರ್ಕಾರಕ್ಕೆ ಲಭಿಸಲಿದೆ.

ಯುಎಪಿಎ ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಇದೇ ವೇಳೆ ತಿದ್ದುಪಡಿಯನ್ನು ವಿರೋಧಿಸಿದ್ದ ಕಾಂಗ್ರೆಸ್’ನ್ನು ಅಮಿತ್ ಶಾ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

click me!