ಸರ್ಕಾರದಿಂದ ನಿವೃತ್ತಿ ವಯೋಮಿತಿ ಹೆಚ್ಚಳ..?

By Kannadaprabha NewsFirst Published Jul 19, 2018, 3:49 PM IST
Highlights

ಇದೀಗ ನಿವೃತ್ತಿ ವಯೋಮಿತಿಯನ್ನು ಹೆಚ್ಚಳ ಮಾಡುವ ಬಗ್ಗೆ  ಕೇಂದ್ರ ಸರ್ಕಾರ ಪರಿಶೀಲನೆಯಲ್ಲಿ ತೊಡಗಿದೆ. ಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶರ ಕೊರತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್  ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಚಿಂತಿಸಿದೆ. 

ನವದೆಹಲಿ: ಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶರ ಕೊರತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್  ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರ ಪರಿಶೀಲನೆಯಲ್ಲಿ ತೊಡಗಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಗಳ ನಿವೃತ್ತಿ ವಯಸ್ಸನ್ನು 65 ರಿಂದ 67ಕ್ಕೆ ಹಾಗೂ ಉಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿಯನ್ನು 62 ರಿಂದ 64 ಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಿದೆ. 

ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ. ದೇಶದ 24 ಹೈಕೋರ್ಟ್‌ಗಳು 406 ನ್ಯಾಯಮೂರ್ತಿಗಳ ಕೊರತೆಯನ್ನು ಎದುರಿಸುತ್ತಿವೆ. ಕರ್ನಾಟಕದಲ್ಲಿ 38  ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಉಳಿದಿವೆ.

click me!