
ವಿಧಾನಸಭೆ: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ಮಾದರಿಯಲ್ಲಿ ಸರ್ಕಾರಿ ವೈದ್ಯರ ನಿಯಂತ್ರಣ ಹಾಗೂ ಸರ್ಕಾರಿ ಆಸ್ಪತ್ರೆ ಕುಂದು-ಕೊರತೆ ಆಲಿಸಲು ಸ್ವತಂತ್ರ ಆಯೋಗ ರಚನೆ ಮಾಡಲು ಮುಂದಿನ ಅಧಿವೇಶನದಲ್ಲಿ ಪ್ರತ್ಯೇಕ ಮಸೂದೆ ಮಂಡಿಸಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದು ಪಡಿ ಕಾಯ್ದೆ ಮೇಲಿನ ಚರ್ಚೆ ವೇಳೆ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ರಮೇಶ್ ಕುಮಾರ್, ಸರ್ಕಾರವು ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ ಯನ್ನು ಪ್ರತ್ಯೇಕಿಸಿ ನೋಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ವಿಧೇಯಕ ತಂದು ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಲು ಮುಂದಾಗಿದ್ದೇವೆ ಎಂದರು.
ಸರ್ಕಾರವು ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯರನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲಿನ ದೂರುಗಳನ್ನು ಆಲಿಸಲು ಸ್ವತಂತ್ರ ಆಯೋಗವನ್ನು ರಚನೆ
ಮಾಡಲಿದೆ. ಇದಕ್ಕೆ ನ್ಯಾಯಾಧೀಶರನ್ನು ಅಥವಾ ಸೂಕ್ತ ವ್ಯಕ್ತಿಯನ್ನು ಮುಖ್ಯಸ್ಥರ ನ್ನಾಗಿ ಮಾಡಲಾಗುವುದು. ಈ ಮೂಲಕ ಸರ್ಕಾರಿ ಆಸ್ಪತ್ರೆ, ವೈದ್ಯರ ಮೇಲಿನ ದೂರುಗಳನ್ನೂ ಆಲಿಸಿ ಸೇವೆ ಉತ್ತಮಪಡಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಾಯ್ದೆ ಮಂಡಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕರು ಜವಾಬ್ದಾರಿ ಅರಿಯಿರಿ: ತಮ್ಮ ಮಾತಿನುದ್ದಕ್ಕೂ ಶಾಸಕರನ್ನು ತಿವಿದ ರಮೇಶ್ ಕುಮಾರ್, ಸರ್ಕಾರಿ ಆಸ್ಪತ್ರೆಗಳ ಮೇಲೆ ಆರೋಪ ಮಾಡುವ ನಾವು (ಶಾಸಕರು) ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವುದಿಲ್ಲ. ಏಕೆಂದರೆ ನಮಗೆಲ್ಲ ವೈದ್ಯಕೀಯ ವೆಚ್ಚದ ಮರುಪಾವತಿ ಸೌಲಭ್ಯ ಸರ್ಕಾರದಿಂದ ಸಿಗುತ್ತದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತೇವೆ. ಆಗಾಗ್ಗೆ
ಆಯಾ ಭಾಗದ ಶಾಸ ಕರು ಸರ್ಕಾರಿ ಆಸ್ಪತ್ರೆಗೆ ಹೋಗಿ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಅಥವಾ ಸುಮ್ಮನೆಯಾದರೂ ಭೇಟಿ ನೀಡಬೇಕು. ಆಗ ಆಸ್ಪತ್ರೆಗಳು ಸರಿದಾರಿಗೆ ಬರುತ್ತವೆ. ಇದನ್ನು ಮಾಡದೆ ಸರ್ಕಾರಿ ಆಸ್ಪತ್ರೆಗಳು ಸರಿಯಿಲ್ಲ ಎಂದರೆ ಯಾರು ಹೊಣೆ ಎಂದು ಖಾರವಾಗಿ ಪ್ರಶ್ನಿಸಿದರು. ಅನೇಕ ವರ್ಷಗಳಿಂದಲೂ ಸರ್ಕಾರಿ ಆಸ್ಪತ್ರೆಗಳನ್ನು ಪುನರ್ವಸತಿ ಕೇಂದ್ರಗಳಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.