
ಬೆಂಗಳೂರು(ಜ.03): ಬಾಯಿಗೆ ರುಚಿ ನೀಡೋ ಚಿಕನ್ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋಳಿಗಳಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜನರು ಭಯ ಭೀತರಾಗಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..
ಸಿಲಿಕಾನ್ ಸಿಟಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ತಮಿಳುನಾಡಿನಿಂದ ಬಂದಂತಹ ನಾಟಿ ಕೋಳಿಗಳಲ್ಲಿ ಹೆಚ್1ಎನ್5 ಇರೋದು ಪತ್ತೆಯಾಗಿದೆ. ಯಲಹಂಕ ವಲಯದ ಹೆಬ್ಬಾಳ ದಾಸರಹಳ್ಳಿಯಲ್ಲಿರುವ ಕೆಜಿಎನ್ ಚಿಕನ್ ಸೆಂಟರ್'ಗೆ ತಮಿಳುನಾಡಿನಿಂದ ಕೋಳಿಗಳನ್ನ ತರಿಸಲಾಗಿತ್ತು.ಆದರೆ, 15 ಕೋಳಿಗಳ ಪೈಕಿ ನಾಲ್ಕೈದು ಕೋಳಿಗಳು ಅನುಮಾನಾಸ್ಪಾದವಾಗಿ ಸಾವನ್ನಪ್ಪಿದ್ದರಿಂದ ಚಿಕನ್ ಸೆಂಟರ್ ಮಾಲೀಕರು ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆ ಬಳಿಕ ಕೋಳಿಗಳಲ್ಲಿ ಹೆಚ್1 ಎನ್5 ಸೋಂಕು ಇರೋದು ಪತ್ತೆಯಾಗಿದೆ..
ಇನ್ನು ಹಕ್ಕಿಜ್ವರ ಪ್ರಕರಣ ದೃಢವಾಗುತ್ತಿದ್ದಂತೆ ಬಿಬಿಎಂಪಿ ಹಾಗೂ ಪಶು ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ದಾಸರಹಳ್ಳಿಯ ಕೆಜಿಎನ್ ಅಂಗಡಿಗೆ ತೆರಳಿ ತಪಾಸಣೆ ನಡೆಸಿದರು. ದಾಸರಹಳ್ಳಿ ಸುತ್ತಮುತ್ತಲಿನ ವಲಯದಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ಚಿಕನ್ ಸೆಂಟರ್'ಗಳನ್ನ ಮುಚ್ಚಿಸಲಾಗಿದೆ. ಜೊತೆಗೆ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕೋಳಿಗಳನ್ನ ಮಾರಾಟ ಮಾಡದಂತೆ ಸೂಚಿಸಲಾಗಿದೆ. ಸದ್ಯ ಇರುವ ಕೋಳಿಗಳನ್ನ ಸುಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಆದೇಶ ಬೇಕಿದ್ದು, ಅನುಮತಿ ಕೋರಲಾಗಿದೆ.
ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ಇಂದು ಜಿಲ್ಲಾಧಿಕಾರಿಗಳು ಸಭೆ ಕರೆದಿದ್ದು, ಸೋಂಕು ಹರಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿಯಲ್ಲಿ ಹಕ್ಕಿ ಜ್ವರಕಾಣಿಸಿಕೊಂಡಿದ್ದು ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.