
ಬೆಂಗಳೂರು(ಸೆ.05): ಬಿಜೆಪಿ ಕಾರ್ಯಕರ್ತರು ಇಂದು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಬಿಜೆಪಿಯ ಈ ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವಬಾರು ಕಡೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.
ಈಗಾಗಲೇ ಬೈಕ್'ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ. ಆದರೆ ಬಿಜೆಪಿ ಕಾರ್ಯಕರ್ತರು ಈ ಕಾನೂನು, ನಿಯಮಗಳನ್ನು ಗಾಲಿಗೆ ತೂರಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.