ಬಿಜೆಪಿ ಬತ್ತಳಿಕೆಯಿಂದ ಮತ್ತೊಂದು ಬಾಣ..! 300 ಕೋಟಿ ಅಕ್ರಮ ಎಸಗಿದ್ದಾರಾ ಸಿದ್ದರಾಮಯ್ಯ?

Published : Oct 10, 2017, 07:37 PM ISTUpdated : Apr 11, 2018, 12:35 PM IST
ಬಿಜೆಪಿ ಬತ್ತಳಿಕೆಯಿಂದ ಮತ್ತೊಂದು ಬಾಣ..! 300 ಕೋಟಿ ಅಕ್ರಮ ಎಸಗಿದ್ದಾರಾ ಸಿದ್ದರಾಮಯ್ಯ?

ಸಾರಾಂಶ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಬಾಣ ಪ್ರಯೋಗಿಸಿದೆ. ಸಿಎಂ ವಿರುದ್ಧದ   300 ಕೋಟಿ ಅಕ್ರಮ ಭೂ ಹಗರಣವನ್ನು ದಾಖಲೆ ಸಮೇತ ಬಿಚ್ಚಿಟ್ಟಿದೆ. ಆದರೆ  ಇದಕ್ಕೆ  ಸೊಪ್ಪು  ಹಾಕದ ಸಿಎಂ ಸಿದ್ದರಾಮಯ್ಯ ಕೇಸ್ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಅ.10):  ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಬಾಣ ಪ್ರಯೋಗಿಸಿದೆ. ಸಿಎಂ ವಿರುದ್ಧದ   300 ಕೋಟಿ ಅಕ್ರಮ ಭೂ ಹಗರಣವನ್ನು ದಾಖಲೆ ಸಮೇತ ಬಿಚ್ಚಿಟ್ಟಿದೆ. ಆದರೆ  ಇದಕ್ಕೆ  ಸೊಪ್ಪು  ಹಾಕದ ಸಿಎಂ ಸಿದ್ದರಾಮಯ್ಯ ಕೇಸ್ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಆರೋಪವೇನು?

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧದ ಅಕ್ರಮದ ಬಗ್ಗೆ ಹಳೇ ದಾಖಲೆಗಳನ್ನೇ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ್ದ ಬಿಜೆಪಿ ಸಿಎಂ ಸಿದ್ದರಾಮಯ್ಯ ಮೇಲೆ ಮತ್ತೊಂದು ಬಾಣ ಪ್ರಯೋಗಿಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ ಪುಟ್ಟಸ್ವಾಮಿ ಸಿದ್ದರಾಮಯ್ಯ ವಿರುದ್ಧ 300 ಕೋಟಿ ಅಕ್ರಮ ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಬೆಂಗಳೂರು ಉತ್ತರ ವಲಯದ ಭೂಪಸಂದ್ರದ ಸರ್ವೆ ನಂ. 20, 21ರಲ್ಲಿ 6.26 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆ. ಭೂಸ್ವಾಧೀನದಿಂದ 300 ಕೋಟಿ ಬೆಲೆ ಬಾಳುವ ಜಮೀನು ಕೈಬಿಟ್ಟು ಡಿನೋಟಿಫೈ ಮಾಡಿದ್ದಾರೆ. ಡಿನೋಟಿಫಿಕೇಶನ್ ಆಗಿರುವ ಭೂಮಿಯ ಮೂಲ ಮಾಲೀಕರು ಸೈಯದ್.  ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಈ ಹಂತದಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ಈ ಭೂಮಿಯನ್ನು ಬೇರೊಬ್ಬರ ಹೆಸರಿಗೆ ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಮುಖಂಡ ಬಿಜೆ ಪುಟ್ಟಸ್ವಾಮಿ ಮಾಡಿರೋ ಆರೋಪವನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ನಾನು ಯಾವುದೇ ಡಿನೋಟಿಫೈ ಮಾಡಿಲ್ಲ. ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈ ಬಗ್ಗೆ ವಕೀಲರೊಂದಿಗೆ ಚರ್ಚೆ ಕೂಡ ನಡೆಸಿದ್ದೇನೆ ಅಂತ ಕೇಸ್ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಚುನಾವಣಾ ಸಮೀಪಿಸುತ್ತಿದ್ದಂತೆ ಸಿದ್ದರಾಮಯ್ಯ ಮೇಲೆ ಬೃಹತ್ ಭೂಹಗರಣ ಕೇಳಿ ಬಂದಿರುವುದು ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ.  ಆದ್ರೆ ಸಿದ್ದರಾಮಯ್ಯ ಮಾತ್ರ ಕೇಸ್ ಹಾಕುವ ಬೆದರಿಕೆಯೊಡ್ಡುತ್ತಿದ್ದಾರೆ. ಯಾವುದು ಸುಳ್ಳು, ಯಾವುದು ಸತ್ಯ ಎಂಬುದನ್ನು ರಾಜ್ಯದ ಜನರೇ ನಿರ್ಧರಿಸಬೇಕಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?