ಚಿಂಚೋಳಿ, ಕುಂದಗೋಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ

By Web Desk  |  First Published Apr 28, 2019, 4:41 PM IST

ಚಿಂಚೋಳಿ ಹಾಗೂ ಕುಂದಗೋಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬೆನ್ನಲ್ಲೆ ಇದೀಗ ಬಿಜೆಪಿಯೂ ಸಹ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 


ಬೆಂಗಳೂರು, [ಏ.28]: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನಸಭೆ ಉಪಚುನಾವಣೆಯ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. 

ಕುಂದಗೋಳ ಹಾಗೂ ಚಿಂಚೋಳಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಇಂದು [ಭಾನುವಾರ] ತನ್ನ ಅಭ್ಯರ್ಥಿಗಳನ್ನ ಪ್ರಕಟಿಸಿದೆ.

Latest Videos

undefined

ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾದ ಕಲಬುರಗಿ ಜಿಲ್ಲೆ ಚಿಂಚೊಳ್ಳಿ ಉಪಚುನಾವಣೆಗೆ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಧಾರವಾಡ ಜಿಲ್ಲೆಯು ಕುಂದಗೋಳ ಕ್ಷೇತ್ರಕ್ಕೆ ಎಸ್.ಐ. ಚಿಕ್ಕನಗೌಡ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.

ಚಿಂಚೋಳಿ,ಕುಂದಗೋಳ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್

ನಿನ್ನೆ [ಶನಿವಾರ] ಕಾಂಗ್ರೆಸ್ ಹಾಗು ಜೆಡಿಎಸ್ ತನ್ನ ಮೈತ್ರಿ ಅಭ್ಯರ್ಥಿಗಳನ್ನ ಘೋಷಿಸಿದ್ದು, ಚಿಂಚೋಳಿಯಿಂದ ಸುಬಾಷ್ ರಾಥೋಡ್ ಹಾಗೂ ಕುಂದಗೋಳಕ್ಕೆ ಕುಸುಮಾವತಿ ಶಿವಳ್ಳಿ ಅವರನ್ನು ಕಣಕ್ಕಿಳಿಸಿದೆ.

ಉಮೇಶ್ ರಾಜೀನಾಮೆಯಿಂದ ತೆರವಾದ ಕಲಬುರಗಿ ಜಿಲ್ಲೆ ಚಿಂಚೋಳಿ ಹಾಗೂ ಸಿ.ಎಸ್ .ಶಿವಳ್ಳಿ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ಇದೇ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

click me!