ರಾಜ್ಯಪಾಲರ ಅಂಗಳಕ್ಕೆ ಪರೇಶ್ ಮೆಸ್ತಾ ಪ್ರಕರಣ

By Suvarna Web Desk  |  First Published Dec 13, 2017, 10:56 AM IST

ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಹತ್ಯೆಯಾದ ಪರೇಶ್ ಮೇಸ್ತ ಪ್ರಕರಣವನ್ನು ರಾಜ್ಯ ಬಿಜೆಪಿ ಇದೀಗ ರಾಜ್ಯಪಾಲರ ಅಂಗಳಕ್ಕೆ ಕೊಂಡೊಯ್ದಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.


ಬೆಂಗಳೂರು (ಡಿ.13): ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಹತ್ಯೆಯಾದ ಪರೇಶ್ ಮೇಸ್ತ ಪ್ರಕರಣವನ್ನು ರಾಜ್ಯ ಬಿಜೆಪಿ ಇದೀಗ ರಾಜ್ಯಪಾಲರ ಅಂಗಳಕ್ಕೆ ಕೊಂಡೊಯ್ದಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.

ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ನೇ ತೃತ್ವದಲ್ಲಿ ಬಿಜೆಪಿ ಶಾಸಕರು ಹಾಗೂ ಮುಖಂಡರು ಮಂಗಳವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸೇರಿದಂತೆ ಆರ್‌ಎಸ್‌ಎಸ್, ಬಿಜೆಪಿ ಮತ್ತು ಹಿಂದೂ ಕಾರ‌್ಯಕರ್ತ ರ ಮೇಲೆ ಹಲ್ಲೆ, ಹತ್ಯೆಗಳು ನಡೆಯುತ್ತಿವೆ. ಪ್ರಕರ ಣವು ಗಂಭೀರ ಸ್ವರೂಪದಿಂದ ಕೂಡಿರುವ ಹಿನ್ನೆಲೆ ಯಲ್ಲಿ ಎಲ್ಲಾ ಘಟನೆಗಳ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಮತ್ತು ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳು ಈ ಘಟನೆಗಳ ಹಿಂದಿರುವ ಮಾಹಿತಿ ಇರುವ ಹಿನ್ನೆಲೆ ಯಲ್ಲಿ ಆ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಬಿಜೆಪಿ ನಾಯಕರು ಕೋರಿದ್ದಾರೆ. ಪ್ರತಿ ಪ್ರಕರಣದಲ್ಲಿಯೂ ಪೊಲೀಸರು ಆರೋಪಿ ಗಳನ್ನು ಬಂಧಿಸುವ ಬದಲು ಪ್ರತಿಭಟನೆ ವೇಳೆ ಲಾಠಿ ಪ್ರಹಾರ ನಡೆಸುವ ಮೂಲಕ ಗಲಭೆಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವುದನ್ನು ಗಮನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಇದೇ ರೀತಿಯಲ್ಲಿ ಘಟನೆ ಮರುಕಳಿಸಿದೆ. ಇದಕ್ಕೆ ಸಂಬಂಧಪಟ್ಟಂತಹ ಫೋಟೋ, ವಿಡಿಯೋಗಳನ್ನು ನೀಡಲಾಗಿದೆ. ಜಿಹಾದಿ ಹೆಸರಿನಲ್ಲಿ ಪರೇಶ್ ಮೇಸ್ತನ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಆರ್‌ಎಸ್ ಎಸ್, ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆಯಾ ಗುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ರೀತಿಯ ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡುವ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲವಾಗಿದೆ. ರಾಜ್ಯದ ಜನತೆ ಸಹ ಸರ್ಕಾರದ ಮೇಲಿನ ವಿಶ್ವಾಸ ವನ್ನು ಕಳೆದುಕೊಂಡಿದ್ದಾರೆ. ಎಲ್ಲಾ ಪ್ರಕರಣಗಳಿಗೂ ನ್ಯಾಯ ಒದಗಿಸಬೇಕಾದರೆ ಎನ್‌ಐಎಗೆ ತನಿಖೆ ವ ಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇರಳದ ದಾರಿಯಲ್ಲಿ ಕರ್ನಾಟಕ: ಸುದ್ದಿಗಾರರ ಜತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಅಶಾಂತಿ ಹೆಚ್ಚಾಗಿರುವ ಕೇರಳ ಮಾದರಿಯಲ್ಲಿಯೇ ಕರ್ನಾಟಕ ಸಾಗುತ್ತಿದೆ ಎಂದು ಕಿಡಿಕಾರಿದರು.

Tap to resize

Latest Videos

click me!