
ಬೆಂಗಳೂರು (ಏ. 08): ಮಾಜಿ.ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಯತೀಂದ್ರ ವಿರುದ್ಧ ವರುಣಾ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು ವರುಣಾ ಬಿಜೆಪಿ ಘಟಕದಲ್ಲಿ ಕಾರ್ಯ ಚಟುವಟಿಕೆ ಗರಿಗದರಿದೆ.
ಮೈಸೂರಿನ ರಾಜೇಂದ್ರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಮುಖಂಡರುಗಳ ಜೊತೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ವಿಜಯೇಂದ್ರ ಸಭೆ ನಡೆಸಲಿದ್ದಾರೆ. ವರುಣ ಕ್ಷೇತ್ರದ ಹದಿನಾರು, ಕವಲಂದೆ, ತಾಂಡವಪುರ, ವರುಣ ಸೇರಿದಂತೆ ಎಲ್ಲಾ ಕ್ಷೇತ್ರದ ಮುಖಂಡರುಗಳ ಸಭೆ ಕರೆದಿದ್ದಾರೆ ವಿಜಯೇಂದ್ರ. ಸಿಎಂ ಪುತ್ರ ಯತೀಂದ್ರ ವಿರುದ್ದ ಕದನಕ್ಕೆ ವಿಜೇಯೇಂದ್ರ ಫುಲ್ ರೆಡಿಯಾಗಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಕ್ಷೇತ್ರ ಪ್ರವಾಸ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.