ಪಶ್ಚಿಮ ಬಂಗಾಳದಲ್ಲಿ ದಾಖಲೆ ಸಂಖ್ಯೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಬಿಜೆಪಿ ಟಿಕೆಟ್

First Published May 6, 2018, 3:15 PM IST
Highlights

 ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಸಂಖ್ಯಾತ ಮತಗಳನ್ನು ಪಡೆಯಲು ಮಾಸ್ಟರ್ ಪ್ಲಾನ್ ಮಾಡಿದೆ. ದಾಖಲೆ ಸಂಖ್ಯೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಿದೆ. 

ಕೋಲ್ಕತಾ :  ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಸಂಖ್ಯಾತ ಮತಗಳನ್ನು ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. 

ಇದೇ ಮೊದಲ ಬಾರಿ ಅಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವ ಮೂಲಕ ದಾಖಲೆ ನಿರ್ಮಿಸಿದೆ. ಅಲ್ಪ ಸಂಖ್ಯಾತ ಸಮುದಾಯದ ಮತಗಳಿಗೆ  ಬಿಜೆಪಿ ಇಂತಹ ಸ್ಟ್ರಾಟಜಿಯೊಂದಕ್ಕೆ ಮುಂದಾಗಿದೆ. 

ಮೇ 14 ರಂದು ಇಲ್ಲಿ ಗ್ರಾಮ ಮಂಚಾಯತ್  ಚುನಾವಣೆ ನಡೆಯಲಿದ್ದು, ಸುಮಾರು 850 ಕ್ಕೂ ಅಧಿಕ ಅಲ್ಪ ಸಂಖ್ಯಾತರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಇಲ್ಲಿ 2013 ನೇ ಸಾಲಿನಲ್ಲಿ ನಡೆದ ಪಂಚಾಯತ್ ಪೋಲ್ ನಲ್ಲಿ 100 ಕ್ಕೂ ಕಡಿಮೆ ಸಂಖ್ಯೆಯ ಅಲ್ಪ ಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು. 

ಟಿಎಂಸಿಯೊಂದಿಗಿನ ಪ್ರಭಲ ಸ್ಪರ್ಧೆಯೇ ಇದಕ್ಕೆ ಕಾರಣವಾಗಿದೆ. ಅಲ್ಪಸಂಖ್ಯಾತ ಮತಗಳನ್ನು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಪಡೆಯಬೇಕು ಎನ್ನುವುದರೊಂದಿಗೆ ಅವರಲ್ಲಿ ನಂಬಿಕೆಯನ್ನು ಗಳಿಸಿಕೊಳ್ಳಲು ಕೂಡ ಈ ಮೂಲಕ ಯತ್ನಿಸುತ್ತಿದೆ. 

ಪಶ್ಚಿಮ ಬಂಗಾಳದಲ್ಲಿ 3358 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಇನ್ನು 2016 ರಲ್ಲಿ ಇಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 294 ಅಭ್ಯರ್ಥಿಗಳಲ್ಲಿ ಕೇವಲ 6 ಮಂದಿ  ಅಲ್ಪ ಸಂಖ್ಯಾತರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು.

click me!