
ಲಂಡನ್ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಗೆಲುವು ಪಡೆಯುವುದು ಖಚಿತ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಭರವಸೆ ವ್ಯಕ್ತಪಡಿಸಿದ್ದಾರೆ.
ಇದು ಅಸಾಧ್ಯ ಎನ್ನುವ ಮಾತೇ ಇಲ್ಲ. ಅಲ್ಲದೇ ಭಾರತವು ಹೆಚ್ಚಿನ ಅಭಿವೃದ್ಧಿಯನ್ನು ಕಾಣುತ್ತಿದೆ ಎಂದು ಲಂಡನ್ ನಡೆದ 2 ದಿನಗಳ ಬ್ರಿಟನ್ ಹಾಗೂ ಭಾರತ ಲೀಡರ್ ಶೀಪ್ ಕಾನ್ ಕ್ಲೇವ್ ಉದ್ದೇಶಿಸಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.
ಇನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ 300ಕ್ಕಿಂತಲೂ ಅಧಿಕ ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಮಿತ್ರ ಪಕ್ಷಗಳೊಂದಿಗೆ ಚುನಾವಣೆ ಎದುರಿಸುವ ಮೂಲಕ ಬಹುಮತ ಪಡೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಭವಿಷ್ಯವನ್ನು ಉಜ್ವಲಗೊಳಿಸಲು ಬಿಜೆಪಿಯು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕವಾದ ಆಡಳಿತವನ್ನು ನೀಡುತ್ತಿದೆ. ಆದ್ದರಿಂದ ಭಾರತದ ಅಭಿವೃದ್ಧಿಗಾಗಿ ಜನರು ಮತ್ತೊಮ್ಮೆ ಬಿಜೆಪಿ ಆಯ್ಕೆ ಮಾಡುವುದರಲ್ಲಿ ಯಾವುದೇ ಅನುಮಾನಗಳಿಲ್ಲವೆಂದು ಗೋಯಲ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.