
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ಏರತೊಡಗಿದ ಬೆನ್ನಲ್ಲೇ ಮುಂದಿನ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಭಾನುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.
ಒಂದೂವರೆ ತಿಂಗಳ ಅವಧಿಯ ಪಕ್ಷದ ‘ಜನಸಂಪರ್ಕ ಅಭಿಯಾನ' ನಡೆಯುತ್ತಿರುವ ನಡುವೆಯೇ ಈ ಕೋರ್ ಕಮಿಟಿ ಸಭೆ ಕರೆದಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಮೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧನಾ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಕೋರ್ ಕಮಿಟಿ ಸದಸ್ಯರು ಚರ್ಚಿಸಿ ರೂಪರೇಷೆ ಸಿದ್ಧಪಡಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
ಜತೆಗೆ ಪ್ರಸಕ್ತ ಜನಸಂಪರ್ಕ ಅಭಿಯಾನದಲ್ಲಿ ಜಿಲ್ಲಾವಾರು ಹೆಚ್ಚು ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಮಾಡುವ ಮೂಲಕ ಪಕ್ಷದ ಸಂಘಟನೆ ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.