
ಬೆಂಗಳೂರು: ಕಳೆದ ಮೂರು ನಾಲ್ಕು ದಿನಗಳಿಂದ ಮಹದಾಯಿ ಹೋರಾಟಗಾರರು ನಗರದ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದು, ಬಿಜೆಪಿಯಿಂದ ಸ್ಪಷ್ಟ ಉತ್ತರ ಬಂದರೆ, ಸ್ಥಳದಿಂದ ಕದಲುವುದಾಗಿ ಹೇಳುತ್ತಿದ್ದಾರೆ.
ಪ್ರತಿಭಟನಾಕಾರರಿಗೆ ಬೆದರಿದೆ ಬಿಜೆಪಿ, ಪಕ್ಷದ ಕಚೇರಿಯಲ್ಲಿ ನಡೆಯಬೇಕಾಗಿದ್ದ ಕೋರ್ ಕಮಿಟಿ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಸ್ಥಳಾಂತರಿಸಿದ್ದು, ಅಲ್ಲಿ ಈ ಸಂಬಂಧ ಯಾವ ನಿರ್ಧಾರ ತೆಗೆದುಕೊಳ್ಳಬಹುದೆಂಬುದನ್ನು ನಿರ್ಧರಿಸಲಾಗುತ್ತದೆ, ಎನ್ನಲಾಗುತ್ತಿದೆ.
ಮಹದಾಯಿ ಹೋರಾಟಕ್ಕೆ ಚಿತ್ರರಂಗ ಬೆಂಬಲ
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಸ್ಯಾಂಡಲ್‌ವುಡ್, ಹೋರಾಟಕ್ಕೆ ಕೈ ಜೋಡಿಸುವುದಾಗಿ ಭರವಸೆ ನೀಡಿದೆ. ಮಧ್ಯಾಹ್ನದ ನಂತರ ಪ್ರತಿಭಟನಾ ಸ್ಥಳಕ್ಕೆ ಶಿವರಾಜ್‌ಕುಮಾರ್ ಸೇರಿ ನಟರು ಆಗಮಿಸುವ ನಿರೀಕ್ಷೆ ಇದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ನೇತೃತ್ವ ವಹಿಸಲಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.