ಆರೋಪಿ ಶಾಸಕ ಬಿಜೆಪಿಯಿಂದ ಉಚ್ಚಾಟನೆ

Published : Aug 02, 2019, 10:52 AM IST
ಆರೋಪಿ ಶಾಸಕ ಬಿಜೆಪಿಯಿಂದ ಉಚ್ಚಾಟನೆ

ಸಾರಾಂಶ

ಹಲವು ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಹಲವು ಬಾರಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಶಾಸಕ ಸೆಂಗರ್ ರನ್ನು ಹೊರ ಹಾಕಲಾಗಿದೆ. 

ನವದೆಹಲಿ [ಆ.02]: ಎರಡು ವರ್ಷಗಳ ಹಿಂದೆ ಉನ್ನಾವೋದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಹಾಗೂ ಆಕೆಯ ಕುಟುಂಬವನ್ನೇ ಅಪಘಾತ ನಡೆಸಿ ಕೊಲ್ಲಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್‌ ಸೆಂಗರ್‌ನನ್ನು ಬಿಜೆಪಿ ಉಚ್ಚಾಟಿಸಿದೆ. 

4 ಬಾರಿ ಉತ್ತರಪ್ರದೇಶ ವಿಧಾನಸಭೆಗೆ ಆರಿಸಿ ಬಂದಿರುವ ಅವರು 2002ರಲ್ಲಿ ಬಿಎಸ್ಪಿ, 2007 ಹಾಗೂ 2012ರಲ್ಲಿ ಸಮಾಜವಾದಿ ಪಕ್ಷ ಹಾಗೂ 2017ರಲ್ಲಿ ಬಿಜೆಪಿಯಿಂದ ಗೆದ್ದಿದ್ದಾರೆ.

ಬಿಜೆಪಿಯ ಈ ನಿರ್ಧಾರದ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ, ಕ್ರಿಮಿನಲ್‌ಗೆ ಇಷ್ಟುದಿನ ಬಲ ತುಂಬಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ. ಆ ತಪ್ಪನ್ನು ಸರಿಪಡಿಸಿಕೊಳ್ಳಲು ಕೊನೆಗೂ ಕ್ರಮ ಕೈಗೊಂಡಿದೆ ಎಂದು ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ