ಸಾಲ ಮನ್ನಾ ಬೆನ್ನಲ್ಲೇ ಬಿಜೆಪಿ ಚುನಾವಣಾ ಕಹಳೆ

By Suvarna Web DeskFirst Published Jun 23, 2017, 1:10 PM IST
Highlights

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲಮನ್ನಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರನ್ನು ಭೇಟಿ ಮಾಡಿ ರಾಜ್ಯದ ವಾಸ್ತವ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗುವುದು
ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ರೈತರು ಸಹಕಾರ ಸಂಘ-ಸಂಸ್ಥೆಗಳಲ್ಲಿ ರೂ.50 ಸಾವಿರವರೆಗಿನ ಸಾಲವನ್ನು ಮನ್ನಾ ಮಾಡಿದ 24 ತಾಸಿನಲ್ಲಿಯೇ ಬಿಜೆಪಿಯು ಚುನಾವಣೆ ಕಹಳೆ ಮೊಳಗಿಸಿದ್ದು, ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಪೂರ್ಣಪ್ರಮಾಣದಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳು ವಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಬೇಕಾ ದಲ್ಲಿ ಪಕ್ಷದ ಬಲವರ್ಧನೆಗೆ ಮತ್ತು ಸಂಘಟ ನೆಗಾಗಿ ತಾವು ಸೇರಿದಂತೆ ತಮ್ಮ ಕ್ಷೇತ್ರದ 100 ಮಂದಿಯ ಜೊತೆ 15 ದಿನಗಳ ಕಾಲ ವಿಸ್ತಾರಕರಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯವು ಮುಂದಿನ ಜುಲೈ 25ರೊಳಗೆ ಮುಗಿಸಬೇಕು ಎಂದೂ ಅವರು ಸ್ಪರ್ಧಿಸುವ ಆಕಾಂಕ್ಷಿಗಳಿಗೆ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರದಲ್ಲಿನ ಬಿಜೆಪಿಯ ಕಚೇರಿ ಯಲ್ಲಿ ಗುರುವಾರ ನಡೆದ ರಾಜ್ಯ ಪದಾಧಿಕಾ ರಿಗಳ ಹಾಗೂ ಜಿಲ್ಲಾ ಅಧ್ಯಕ್ಷ-ಪ್ರಧಾನ ಕಾರ್ಯದರ್ಶಿಗಳ ಸಭೆಯ ಉದ್ಘಾಟನೆ ನೆರ ವೇರಿಸಿ ಮಾತನಾಡಿದ ಅವರು, ಚುನಾವಣೆಗೆ ಈಗಿನಿಂದಲೇ ಸಜ್ಜಾ ಗಬೇಕಿದ್ದು, ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಮುಂ ದಿನ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ವಿಸ್ತಾರಕರಾಗಿ ಕೆಲಸ ಮಾಡಬೇಕು. ತಾವು ಸೇರಿ 100 ಮಂದಿ ವಿಸ್ತಾರಕರಾಗಿ ಕಾರ್ಯನಿರ್ವಹಿಸ ಬೇಕು. ಈ ಕಾರ್ಯವು ಜು.25ರೊಳಗೆ ಮುಗಿಸಬೇಕಾಗಿದೆ ಎಂದರು.

ಜು.7ರ ಹೋರಾಟ ತಾತ್ಕಾಲಿಕ ಮುಂದಕ್ಕೆ:

ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಜು.7ರಿಂದ ಆರಂಭಿಸಲು ಉದ್ದೇಶಿಸಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿ ಯೂರಪ್ಪ ತಿಳಿಸಿದ್ದಾರೆ. ಬಿಜೆಪಿಯ ಹೋರಾ ಟದ ಎಚ್ಚರಿಕೆಗೆ ಮಣಿದು ಸರ್ಕಾರ ಸಾಲ ಮನ್ನಾ ಮಾಡಿದೆ. ಸಾಲಮನ್ನಾಕ್ಕೆ ಒತ್ತಾಯಿಸಿ ಜು.10ರಂದು ನಡೆಸಲು ಉದ್ದೇಶಿ ಸಿದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಾಲಮನ್ನಾ ಪಕ್ಷದ ಹೋರಾಟದ ಫಲವಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲಮನ್ನಾ ಬಗ್ಗೆ ಪ್ರಧಾನಿ ನರೇಂದ್ರಮೋದಿ ಮತ್ತು ವಿತತ್ತ ಸಚಿವ ಜೇಟ್ಲಿ ಅವರನ್ನು ಭೇಟಿ ಮಾಡಿ ರಾಜ್ಯದ ವಾಸ್ತವ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

 

click me!