ಬಿಜೆಪಿ ಒಳಜಗಳ: ಮಧ್ಯಪ್ರವೇಶಿಸಿದ ಹೈಕಮಾಂಡ್; ರಾಜ್ಯ ನಾಯಕರಿಗೆ ಬುಲಾವ್

Published : Jan 25, 2017, 12:25 PM ISTUpdated : Apr 11, 2018, 12:39 PM IST
ಬಿಜೆಪಿ ಒಳಜಗಳ: ಮಧ್ಯಪ್ರವೇಶಿಸಿದ ಹೈಕಮಾಂಡ್; ರಾಜ್ಯ ನಾಯಕರಿಗೆ ಬುಲಾವ್

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪರಿಷತ್ ವಿಪಕ್ಷ ನಾಯಕ ಕೆ.ಎಸ್ .ಈಶ್ವರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ದೂರವಾಣಿ ಕರೆ ಮಾಡಿ ತಿಳಿಸಲಾಗಿದೆ.

ಬೆಂಗಳೂರು (ಜ.25): ರಾಯಣ್ಣ ಬ್ರಿಗೇಡ್ ಸಂಬಂಧ ಬಿಜೆಪಿಯಲ್ಲಿ ಭಿನ್ನಮತ ತಾರಕ್ಕೇರಿದೆ. ಹೀಗಾಗಿ ಮಧ್ಯಪ್ರವೇಶಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಬುಲಾವ್ ನೀಡಿದೆ.

ಜನವರಿ 27 ರಂದು ಶುಕ್ರವಾರ ದೆಹಲಿಗೆ ಆಗಮಿಸುವಂತೆ  ರಾಜ್ಯ ಬಿಜೆಪಿ ನಾಯಕರಿಗೆ  ಬಿಜೆಪಿ ವರಿಷ್ಠರು ಬುಲಾವ್ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪರಿಷತ್ ವಿಪಕ್ಷ ನಾಯಕ ಕೆ.ಎಸ್ .ಈಶ್ವರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ದೂರವಾಣಿ ಕರೆ ಮಾಡಿ ತಿಳಿಸಲಾಗಿದೆ.

ಸಂಜೆ 6 ಗಂಟೆಗೆ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ  ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬ್ರಿಗೇಡ್ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಕುರಿತು ಚರ್ಚಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
ಪ್ರಾಜೆಕ್ಟ್ ಖುಷಿ 3 ತಿಂಗಳ ಸ್ವಾಸ್ಥ್ಯ ಅಭಿಯಾನದಲ್ಲಿ ಹಲವು ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸ್!