‘ನಾಯ್ಡುಗಾರು ದೇಶ ಉಳಿಸೋ ಮುನ್ನ ನಿಮ್ಮ ಸೀಟು ಉಳಿಸಿಕೊಳ್ಳಿ’!

Published : Nov 03, 2018, 06:51 PM IST
‘ನಾಯ್ಡುಗಾರು ದೇಶ ಉಳಿಸೋ ಮುನ್ನ ನಿಮ್ಮ ಸೀಟು ಉಳಿಸಿಕೊಳ್ಳಿ’!

ಸಾರಾಂಶ

ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಬಿಜೆಪಿ ತಿರುಗೇಟು! ‘ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ’! ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತ್ಯುತ್ತರ! ದೇಶ ಉಳಿಸಲು ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಎಂದಿದ್ದ ಆಂಧ್ರ ಸಿಎಂ! ಆಂಧ್ರ ಪ್ರದೇಶ ಸರ್ಕಾರ ಜನ ವಿರೋಧಿ ಎಂದ ರಾಮ್ ಮಾಧವ್  

ನವದೆಹಲಿ(ನ.3): ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ ಎಂದು ಇತ್ತೀಚಿಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ದೇಶ ಉಳಿಸಲು ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಎಂದಿದ್ದ ಆಂಧ್ರ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಟಿಡಿಪಿ ಮುಖ್ಯಸ್ಥ ಮೊದಲು ತಮ್ಮ ಸ್ಥಾನ ಉಳಿಸಿಕೊಳ್ಳಲಿ ನಂತರ ದೇಶ ಉಳಿಸುವ ಬಗ್ಗೆ ಚಿಂತಿಸಲಿ ಎಂದು ವ್ಯಂಗ್ಯವಾಡಿದ್ದಾರೆ.

ನಾಯ್ಡು ದೇಶ ಉಳಿಸುವ ಬಗ್ಗೆ ಮಾತನಾಡುವುದು ದೊಡ್ಡ ವಿಚಾರ. ಮೊದಲು ಅವರು ಆಂಧ್ರದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಯತ್ನಿಸಲಿ. ಸದ್ಯದ ಆಂಧ್ರ ಪ್ರದೇಶ ಸರ್ಕಾರ ಜನ ವಿರೋಧಿಯಾಗಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದೆ. 2019ರ ಚುನಾವಣೆಯಲ್ಲಿ ಟಿಡಿಪಿ ಖಂಡಿತ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಧವ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಕಳೆದ ಮಾರ್ಚ್ ನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ತೊರೆದಿದ್ದ ನಾಯ್ಡು, ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಚತುರತೆ ಕಂಡು ಬೆಚ್ಚಿಬೀಳುತ್ತಿದ್ದ: ಪ್ರಿಯಾಂಕಾ ವಾದ್ರಾ ಮಾತಿಗೆ ನಕ್ಕ ಅಮಿತ್‌ ಶಾ
ಇರುವೆಗಳನ್ನು ಕದ್ದು ಸಿಕ್ಕಿಬಿದ್ದ ಕಳ್ಳ; ಪ್ರತಿ ಇರುವೆಗೆ ₹290ರಂತೆ ₹6.4 ಲಕ್ಷ ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್