ಬಿಜೆಪಿ ಕಚೇರಿಗೆ ಬಾಂಬ್‌: ಮೈಸೂರಿಂದ ಬೆದರಿಕೆ ಕರೆ, ವೃದ್ಧ ಅರೆಸ್ಟ್!

Published : Jun 23, 2019, 10:42 AM IST
ಬಿಜೆಪಿ ಕಚೇರಿಗೆ ಬಾಂಬ್‌: ಮೈಸೂರಿಂದ ಬೆದರಿಕೆ ಕರೆ, ವೃದ್ಧ ಅರೆಸ್ಟ್!

ಸಾರಾಂಶ

ಬಿಜೆಪಿ ಕಚೇರಿಗೆ ಬಾಂಬ್‌: ಮೈಸೂರಿಂದ ಬೆದರಿಕೆ ಕರೆ| ಇದು ಕಿಡಿಗೇಡಿಯ ಕೃತ್ಯ: ಪೊಲೀಸರು| ಕರ್ನಾಟಕ ಪೊಲೀಸರಿಗೆ ಮಾಹಿತಿ ರವಾನೆ

ನವದೆಹಲಿ[ಜೂ.23]: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯನ್ನು ಸ್ಫೋಟಿಸುವುದಾಗಿ ಮೈಸೂರಿನಿಂದ ಕರೆ ಮಾಡಿ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಶನಿವಾರ ಹುಸಿಬಾಂಬ್‌ ಕರೆಯೊಂದು ಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕರೆ ಕರ್ನಾಟಕದ ಮೈಸೂರಿನಿಂದ ಬಂದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನ ಯಾರೋ ಕಿಡಿಗೇಡಿ ಈ ಕರೆ ಮಾಡಿದ್ದಾನೆ. ಪ್ರಾಥಮಿಕ ತನಿಖೆ ಬಳಿಕ ಇದೊಂದು ಹುಸಿ ಕರೆ ಎಂಬುದು ಗೊತ್ತಾಗಿದೆ. ಹುಸಿ ಬಾಂಬ್‌ ಬೆದರಿಕೆ ಕುರಿತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ವಿವರಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆದರಿಕೆ ಕರೆ ಬಂದ ಬೆನ್ನಲ್ಲೇ ದೆಹಲಿ ಪೊಲೀಸರು ದೀನ್‌ ದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ತೆರಳಿ, ಮಾಹಿತಿ ಕಲೆಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಂಗ್ಲಾದೇಶದಲ್ಲಿ ಹಿಂದು ವ್ಯಕ್ತಿ ಜೀವಂತ ಸುಡಲೆತ್ನ!
ಗಣಿನಾಡಲ್ಲಿ ರೆಡ್ಡಿಗಳ ರಕ್ತಚರಿತ್ರೆ: ಜನಾರ್ದನ ರೆಡ್ಡಿ ತಲೆಗೆ ಗುರಿ ಇಟ್ಟಿದ್ದಾರಾ ಬಿಹಾರದ ರೌಡಿಗಳು? ಬಳ್ಳಾರಿಯಲ್ಲಿ ಬುಲೆಟ್ ಸದ್ದು!