
ಬೆಂಗಳೂರು(ಅ.05): ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನು ಒಂದೂವರೆ ವರ್ಷಗಳು ಬಾಕಿಯಿರುವಂತೆಯೇ ಬಿಜೆಪಿ ತನ್ನ ಸಿಎಂ ಅಭ್ಯರ್ಥಿಯನ್ನು ಪರೋಕ್ಷವಾಗಿ ಘೋಷಿಸಿಕೊಂಡಿದೆ.
ನಿನ್ನೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್, ರಾಜ್ಯದ ಮುಂದಿನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು? ನಾನೇ ಹೇಳಬೇಕೇ? ಅಥವಾ ನೀವೇ ಹೇಳುತ್ತೀರಾ? ಎಂದು ಸಭೆಯನ್ನುದ್ದೇಶಿಸಿದ ಮಾತಿಗೆ ನಿಂತಾಗ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದ ಎಲ್ಲಾ 546 ಸದಸ್ಯರು ಯಡಿಯೂರಪ್ಪನವರೇ ಮುಂದಿನ ಸಿಎಂ ಅಭ್ಯರ್ಥಿಯಾಗಲಿ ಅಂತಾ ಒಕ್ಕೊರಲಿನಿಂದ ಆಗ್ರಹಿಸಿದ್ದರು.
ಇದೇ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ದಿನದಿಂದ ಮನೆಗೆ ಹೋಗಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತಂದ ನಂತರವೇ ಮನೆಗೆ ಮರಳುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.