ಬಿಜೆಪಿಗೆ ಶುರುವಾಗಿದೆ ಇವೆರೆಡು ರಾಜ್ಯಗಳ ಭೀತಿ

Published : Jul 31, 2018, 05:28 PM IST
ಬಿಜೆಪಿಗೆ ಶುರುವಾಗಿದೆ ಇವೆರೆಡು ರಾಜ್ಯಗಳ ಭೀತಿ

ಸಾರಾಂಶ

ಆಂತರಿಕ ವರದಿಗಳ ಪ್ರಕಾರ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪಕ್ಷಕ್ಕೆ ಪ್ರತಿಕೂಲ ಪರಿಸ್ಥಿತಿ ಎರಡೂ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆಗೆ ಚಿಂತನೆ

ಡಿಸೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯ ಆಂತರಿಕ ವರದಿಗಳ ಪ್ರಕಾರ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪಕ್ಷಕ್ಕೆ ಪ್ರತಿಕೂಲ ಪರಿಸ್ಥಿತಿಯಿದೆ. ಇದರಿಂದ ಬಿಜೆಪಿಯ ಮ್ಯಾನೇಜರ್ ಗಳು ನಿದ್ದೆಗೆಡುವಂತಾಗಿದೆ. ಮಧ್ಯಪ್ರದೇಶದಲ್ಲಿ ಶೇ.75ರಷ್ಟು ಶಾಸಕರಿಗೆ ಟಿಕೆಟ್ ಕೊಡುವುದು ಸಾಧ್ಯವೇ ಇಲ್ಲ ಎಂದು ಅಮಿತ್ ಶಾ ಹೇಳಿದ್ದು, ಶಿವರಾಜ್ ಸಿಂಗ್ ಚೌಹಾಣ್ ಒಪ್ಪಿಕೊಂಡಿದ್ದಾರೆ.

ಆದರೆ ಶಾಸಕರಿಗೆ ಟಿಕೆಟ್ ನಿರಾಕರಿಸಲು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ತಯಾರಿಲ್ಲ. ತನ್ನ ಬೆಂಬಲಿಗ ಶಾಸಕರಿಗೆ ಟಿಕೆಟ್ ತಪ್ಪಿಸಿ ತನ್ನನ್ನು ರಾಜಸ್ಥಾನದ ಬಿಜೆಪಿ ನಾಯಕತ್ವದಿಂದ ಕೆಳಕ್ಕೆ ಇಳಿಸುವ ಯೋಜನೆ ಇದು ಎಂದು ವಸುಂಧರಾ ಕೂಗಾಡುತ್ತಿದ್ದಾರಂತೆ.

ಅಪ್ಪ ಮತ್ತು ಪ್ರಿಯಾಂಕಾ
ತಂದೆ ರಾಜೀವ್ ಗಾಂಧಿ ಬಗ್ಗೆ ತನ್ನ ನೆನಪುಗಳನ್ನು ಪುಸ್ತಕ ರೂಪದಲ್ಲಿ ಪ್ರಿಯಾಂಕಾ ಗಾಂಧಿ ಹೊರತರಲಿದ್ದು, 2019ರ ಚುನಾವಣೆಗೆ ಮೊದಲು ಜನವರಿಯಲ್ಲಿ ಪುಸ್ತಕ ಮಾರುಕಟ್ಟೆಗೆ ಬರಲಿದೆಯಂತೆ. ಯಾರೂ ನೋಡದ ಕುಟುಂಬದ ಕೆಲ ಖಾಸಗಿ ಚಿತ್ರಗಳನ್ನು ಕೂಡ ಪ್ರಿಯಾಂಕಾ ಪ್ರಕಟಿಸುವ ಬಗ್ಗೆ ನಿರೀಕ್ಷೆಗಳಿವೆ. ತಾಯಿ ಸೋನಿಯಾ ಕೈಯಿಂದಲೇ ಪುಸ್ತಕ ಬಿಡುಗಡೆಯಾಗಬಹುದು.

[ಪ್ರಶಾಂತ್ ನಾತು ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ