ಪ್ರಧಾನಿ ಪ್ರಮಾಣವಚನ: ‘ಮೋದಿ..ಮೋದಿ..’ಎಂದು ಕೂಗಿದ ಸಂಸದರು!

Published : Jun 17, 2019, 01:06 PM ISTUpdated : Jun 17, 2019, 01:10 PM IST
ಪ್ರಧಾನಿ ಪ್ರಮಾಣವಚನ: ‘ಮೋದಿ..ಮೋದಿ..’ಎಂದು ಕೂಗಿದ ಸಂಸದರು!

ಸಾರಾಂಶ

ಇಂದಿನಿಂದ 17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ| ಪ್ರಮಾಣವಚನ ಸ್ವೀಕರಿಸುತ್ತಿರುವ ಲೋಕಸಭಾ ನೂತನ ಸಂಸದರು| ಪ್ರಧಾನಿ ಎದ್ದು ನಿಲ್ಲುತ್ತಿದ್ದಂತೇ ‘ಮೋದಿ..ಮೋದಿ..’ಎಂದು ಕೂಗಿದ ಬಿಜೆಪಿ ಸಂಸದರು| ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರಿಂದ ಪ್ರಮಾಣವಚನ ಸ್ವೀಕಾರ| 

ನವದೆಹಲಿ(ಜೂ.17): 17ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದ್ದು, ಲೋಕಸಭೆಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಈ ವೇಳೆ ಸಂಸತ್ ಸದಸ್ಯರಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಮೋದಿ, ಸದನದ ಗೌರವ ಎತ್ತಿ ಹಿಡಿಯುವ ಮೂಲಕ ಜನರ ಸೇವೆಗೆ ಒತ್ತು ನೀಡುವುದಾಗಿ ಹೇಳಿದರು. ಪ್ರಧಾನಿ ಪ್ರಮಾಣವಚನ ಸ್ವೀಕರಿಸುವ ವೇಳೆ ಬಿಜೆಪಿ ನೂತನ ಸಂಸದರು ‘ಮೋದಿ..ಮೋದಿ..’ ಎಂದು ಕೂಗಿದ್ದು ವಿಶೇಷವಾಗಿತ್ತು.

ಪ್ರಮಾಣವಚನ ಸ್ವೀಕರಿಸಲು ಪ್ರಧಾನಿ ಎದ್ದು ನಿಲ್ಲುತ್ತಿದ್ದಂತೇ ‘ಮೋದಿ..ಮೋದಿ..’ಎಂದು ಕೂಗಿ ಬಿಜೆಪಿ ಸಂಸದರು ಕೂಗಿ ಹರ್ಷ ವ್ಯಕ್ತಪಡಿಸಿದರು.

ಇದುವರೆಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಂಸದರ ಪ್ರಮಾಣವಚನ ಎರಡು ದಿನಗಳ ಕಾಲ ನಡೆಯಲಿದೆ.

ಇದೇ ವೇಳೆ ಕೇಂದ್ರದ ಮಾಜಿ ಸಚಿವ ಮತ್ತು ಏಳು ಬಾರಿ ಸಂಸದರಾಗಿರುವ ವಿರೇಂದ್ರ ಕುಮಾರ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ  ಪ್ರಮಾಣವಚನ ಸ್ವೀಕರಿಸಿದರು.  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ವೀರೇಂದ್ರ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!