ಬಿಜೆಪಿ ಮುಖಂಡ ಸಿ.ಟಿ.ರವಿಗೆ ಹೊಸ ಜವಾಬ್ದಾರಿ

By Web DeskFirst Published Jul 20, 2019, 10:33 AM IST
Highlights

ಬಿಜೆಪಿ ನಾಯಕ ಸಿ.ಟಿ ರವಿ ಇದೀಗ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆಂತರಿಕವಾಗಿ ಬಿಜೆಪಿಯಲ್ಲಿ ಮಾಸ್ಟರ್ ಪ್ಲಾನ್ ನಡೆಯುತ್ತಿದ್ದು, ಸಮಿಯೊಂದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 

ನವದೆಹಲಿ[ಜು.20] : ಆಂತರಿಕ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ, ಈ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಸಮಿತಿಯೊಂದನ್ನು ರಚನೆ ಮಾಡಿದೆ. 

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿರುವ ಈ ಸಮಿತಿಯಲ್ಲಿ ಶಾಸಕ ಸಿ.ಟಿ. ರವಿ ಕೂಡ ಸ್ಥಾನ ಪಡೆದಿದ್ದಾರೆ. 

ಕೇಂದ್ರದ ಮಾಜಿ ಕೃಷಿ ಸಚಿವ ರಾಧಾ ಮೋಹನ ಸಿಂಗ್ ಅವರು ಈ ಉಸ್ತುವಾರಿ ಸಮಿತಿಯ ಮುಖ್ಯಸ್ಥರಾಗಿದ್ದಾರೆ.

click me!