ಕಾಂಗ್ರೆಸ್’ನಲ್ಲಿ ಭಿನ್ನಮತ ಭುಗಿಲೆದ್ದಿದೆಯಾ?

First Published Jun 14, 2018, 3:15 PM IST
Highlights

ಈ ಸರ್ಕಾರದಲ್ಲಿ ಭಿನ್ನಮತೀಯ ಚಟುವಟಿಕೆ ಜೋರಾಗಿಯೇ ಶುರುವಾಗಿದೆ. ಕಾಂಗ್ರೆಸ್ ನ ಕುತಂತ್ರದ ರಾಜಕಾರಣ ಮಾಡುತ್ತಿದೆ. ಮಂತ್ರಿ ‌ಮಾಡಲು, ಸ್ಪೀಕರ್ ಆಗಲು ಹೀಗೆ ಪ್ರತಿಯೊಂದು ವಿಷಯದಲ್ಲೂ  ಕುತಂತ್ರ ಮಾಡುತ್ತಿದೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. 
 

ಬೆಂಗಳೂರು (ಜೂ. 14): ಈ ಸರ್ಕಾರದಲ್ಲಿ ಭಿನ್ನಮತೀಯ ಚಟುವಟಿಕೆ ಜೋರಾಗಿಯೇ ಶುರುವಾಗಿದೆ. ಕಾಂಗ್ರೆಸ್ ನ ಕುತಂತ್ರದ ರಾಜಕಾರಣ ಮಾಡುತ್ತಿದೆ. ಮಂತ್ರಿ ‌ಮಾಡಲು, ಸ್ಪೀಕರ್ ಆಗಲು ಹೀಗೆ ಪ್ರತಿಯೊಂದು ವಿಷಯದಲ್ಲೂ  ಕುತಂತ್ರ ಮಾಡುತ್ತಿದೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. 

ಕಾಂಗ್ರೆಸ್ ಎಂಎಲ್ ಎ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ವರಿಷ್ಠರ ಮೇಲೆ ಆರೋಪಿಸುತ್ತಿದ್ದಾರೆ .ಎಂಎಲ್ಸಿ ಲಿಂಗಪ್ಪ ಕೆಪಿಸಿಸಿ ಅಧ್ಯಕ್ಷ ರ ಪಕ್ಷ ಮಾರಾಟ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಜೆಡಿಎಸ್ ಕುತಂತ್ರದಿಂದ ಜಯನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸೋಲಾಯಿತೆಂದರು. ಕಾಂಗ್ರೆಸ್ ಪಕ್ಷದ ನಾಯಕರಲ್ಲೇ ಗೊಂದಲ ಇದೆ ಎಂದು ಈಶ್ವರಪ್ಪ ಹೇಳಿದ್ದಾರೆ.  

ಕಳೆದ 3 ವರ್ಷಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಶಿವಮೊಗ್ಗ ನಗರದಲ್ಲಿ ಟೇಕಾಫ್ ಆಗಿಲ್ಲ. ಸ್ಮಾರ್ಟ್ ಸಿಟಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರದಿಂದ  1 ಸಾವಿರ ಕೋಟಿ ರೂಪಾಯಿ ಅನುದಾನ ಬರಲಿದ್ದು ಈಗಾಗಲೇ ಕೇಂದ್ರದಿಂದ 200 ಕೋಟಿ ರೂ ಅನುದಾನ ಬಂದಿದೆ. ಶೀಘ್ರವಾಗಿ ನಗರದ ಜನತೆಯ ಸಭೆ ಕರೆದು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಜಾರಿಯಾಗಬೇಕಾದ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಪ್ರತಿ 3 ತಿಂಗಳಿಗೊಮ್ಮೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ, ಮತ್ತು ಹಣಕಾಸಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ.  

ಸ್ಲಂ ನಿವಾಸಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನ ಪಡೆದು ಮನೆಗಳ ನಿರ್ಮಾಣ ಮಾಡಲಾಗುವುದು.  ನಗರದ ಹೊರವಲಯದ ಗೋಪಿಶೆಟ್ಟಿ ಕೊಪ್ಪ ಮತ್ತು ಗೋವಿಂದ ಪುರ ಪ್ರದೇಶದಲ್ಲಿ  ಆಶ್ರಯ ಮನೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಸಿದ್ಲಿಪುರ ಮತ್ತು ದೇವಕಾತಿಕೊಪ್ಪ ಪ್ರದೇಶದಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿ ಮತ್ತು ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ 600 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಸರ್ಕಾರಿ ಆಯುಷ್ ಕಾಲೇಜ್ ಆರಂಭಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಆದರೆ ಇನ್ನೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭವಾಗಿಲ್ಲ. ಅದಷ್ಟು ಬೇಗ ಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದೆಂದರು. 

click me!