
ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್’ಲ್ಲಿ ಘಟನೆ ನಡೆದಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಸಂತೋಷ್ (28) ಎಂಬಾತನನ್ನು ಫ್ಲೆಕ್ಸ್ ಕಟ್ಟುತ್ತಿದ್ದ ವೇಳೆ ಹತ್ಯೆ ಮಾಡಲಾಗಿದೆ. ವಾಸೀಂ ಮತ್ತು ಫಿಲಿಪ್ಸ್ ಎಂಬುವವರ ತಂಡವು ಸಂತೋಷ್’ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.
ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಾದ ವಾಸೀಂ ಮತ್ತು ಫಿಲಿಪ್ಸ್’ನನ್ನು ಪೊಲೀಸರು ಬಂಧಿಸಿದ್ದಾರೆ. 3 ದಿನಗಳ ಹಿಂದೆ ಗಾಂಜಾ ಹೊಡೆಯಬೇಡಿ ಎಂದು ಸಂತೋಷ್ ಇವರಿಗೆ ಬುದ್ಧಿ ಹೇಳಿದ್ದ ಎನ್ನಲಾಗಿದೆ.
ಈ ವಿಚಾರವಾಗಿ ಸಂತೋಷ್, ವಾಸೀಂ ಗ್ಯಾಂಗ್ ಮಧ್ಯೆ ಜಗಳ ನಡೆದಿತ್ತು. ಬಳಿಕ ನಿನ್ನೆ ಸಂಜೆ 7.30ಕ್ಕೆ ಬೇಕರಿ ಬಳಿ ಟೀ ಕುಡಿಯುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಸಂತೋಷ್ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಈ ಸಂಬಂಧ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.