
ಕಾನ್ಪುರ[ಆ.26]: ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ಅವರನ್ನು ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೋಶಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಕೆಲಸ ನಿಮಿತ್ತ ಭಾನುವಾರ ಕಾನ್ಪುರಕ್ಕೆ ತೆರಳಿದ್ದ ಜೋಶಿ ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ ಉಂಟಾಗಿದೆ.
85ರ ಹರೆಯದ ಜೋಶಿ ಈ ಹಿಂದೆ ಬಿಜೆಪಿ ಅಧ್ಯಕ್ಷ ಹಾಗೂ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಳೆದ ಅವಧಿಯಲ್ಲಿ ಸಂಸದರಾಗಿದ್ದ ಅವರಿಗೆ ವಯಸ್ಸಿನ ಕಾರಣದಿಂದ ಟಿಕೆಟ್ ನಿರಾಕರಿಸಲಾಗಿತ್ತು. ಜೇಟ್ಲಿ ನಿಧನದ ಮರುದಿನವೇ ಈ ಸುದ್ದಿ ಬಿಜೆಪಿ ನಾಯಕರಲ್ಲಿ ದಂಗು ಬಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.