'420  ಎಂದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು'

By Web DeskFirst Published Oct 24, 2018, 4:39 PM IST
Highlights

ಚುನಾವಣೆ ಸಂದರ್ಭದಲ್ಲಿ ವಾಕ್ಸಮರ ಸಾಮಾನ್ಯ. ಈ ಸಂದರ್ಭದಲ್ಲಿ ಪದ ಬಳಕೆ ಮಾಡುವಾಗಲೂ ತುಂಬಾ ಎಚ್ಚರಿಕೆ ಿರಬೇಕಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ(ಅ.24) ಬಿ. ಶ್ರೀರಾಮುಲುಗೆ 420 ಎಂಬ ಅಸಂವಿಧಾನಿಕ ಪದ ಬಳಸಿದ ಸಿದ್ಧರಾಮಯ್ಯನವರು ಕ್ಷಮೆ ಕೇಳಬೇಕು ಎಂದು ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಈ ರೀತಿ ಪದಬಳಕೆ ಅವರ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಮಾಜಿ ಸಿಎಂ ಸಿದ್ಧರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಮಾಜಿ ಮುಖ್ಯಮಂತ್ರಿ ಹಾಗೂ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆದುಕೊಂಡವರು ಈ ರೀತಿ ಹೇಳಿಕೆ ಕೊಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಗೆಲುವು ಖಚಿತ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರದ್ದು ಪೂರ್ವನಿಯೋಜಿತ ಪ್ರವಾಸ. ಹಾಗಾಗಿ ಅವರು ಪ್ರವಾಸಕ್ಕೆ ತೆರಳಿದ್ದಾರೆ. ಅದರಲ್ಲಿ ಯಾವುದೇ ರಾಜಕೀಯವಿಲ್ಲ. ವಿದೇಶದಿಂದ ಬಂದ ನಂತರ ಅವರು ಪ್ರಚಾರಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಸಿದೆ. ಸಿಎಂ ಕುಮಾರಸ್ವಾಮಿಯವರಿಗೆ ಸರಿಯಾದ ಮಾಹಿತಿಯಿಲ್ಲ.ರಾಜ್ಯಕ್ಕೆ ವಿದ್ಯುತ್ ಕೊರತೆ ಬರಲು ಹೇಗೆ ಸಾಧ್ಯ?  ರಾಜ್ಯಸರ್ಕಾರ ತನ್ನ ಅವ್ಯವಸ್ಥೆಯನ್ನ ಮುಚ್ಚಿಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪ ಏಕಾಂಗಿಯಲ್ಲ ಅವರೊಂದಿಗೆ ನಾವೆಲ್ಲರೂ ಇದ್ದೇವೆ. ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

click me!