ಸಿದ್ದುಗೆ ‘ಹುಳಿ ಸಿದ್ದರಾಮಯ್ಯ’ ಎಂಬ ಬಿರುದು ಬೇಡ: ಅಶೋಕ್‌

Published : Aug 18, 2019, 08:32 AM IST
ಸಿದ್ದುಗೆ ‘ಹುಳಿ ಸಿದ್ದರಾಮಯ್ಯ’ ಎಂಬ ಬಿರುದು ಬೇಡ: ಅಶೋಕ್‌

ಸಾರಾಂಶ

ಸಿದ್ದುಗೆ ‘ಹುಳಿ ಸಿದ್ದರಾಮಯ್ಯ’ ಎಂಬ ಬಿರುದು ಬೇಡ: ಅಶೋಕ್‌| ನಿದ್ದೆರಾಮಯ್ಯ ಎಂಬ ಬಿರುದೇ ಇರಲಿ: ವ್ಯಂಗ್ಯ| ಅವರು ಹುಳಿ ಹಿಂಡುವ ಕೆಲಸ ಮಾಡಬಾರದು

ನವದೆಹಲಿ[ಆ.18]: ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಹಾರ ಕುರಿತ ನಮ್ಮ ಅಹವಾಲನ್ನು 45 ನಿಮಿಷಗಳ ಕಾಲ ಆಲಿಸಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದ ಸಂದರ್ಭದಲ್ಲಿ ರಾಜ್ಯದ ನೆರೆ ಹಾಗೂ ಬರದ ಬಗ್ಗೆ ಚರ್ಚಿಸಲು ಸಮಯವನ್ನೇ ನೀಡುತ್ತಿರಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ದೂರಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ಮೋದಿ ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರ್ಕಾರವನ್ನು ಕಾಂಗ್ರೆಸ್‌ಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಡಾ.ಮನಮೋಹನ್‌ ಸಿಂಗ್‌ ಮತ್ತು ಮೋದಿ ಸರ್ಕಾರದ ಕೊಡುಗೆಯನ್ನು ತುಲನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು. ಅವರಿಗೆ ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ, ‘ನಿದ್ದೆರಾಮಯ್ಯ’ ಎಂಬ ಬಿರುದೇ ಇರಲಿ ಎಂದು ಅಶೋಕ್‌ ಲೇವಡಿ ಮಾಡಿದರು.

ಕಾಂಗ್ರೆಸ್‌ಗೆ ಈ ಬಾರಿ ರಾಜ್ಯದಲ್ಲಿ ಲೋಕಸಭೆಯಲ್ಲಿ ಒಂದಾದರೂ ಸೀಟು ಸಿಕ್ಕಿದೆ. ಪರಿಸ್ಥಿತಿ ಹೀಗೆ ಮುಂದುವರೆದ ಶೂನ್ಯಕ್ಕೆ ಸೀಮಿತವಾಗಬೇಕಾಗುತ್ತದೆ ಎಂದು ಕಾಲೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ
ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!