ಸಿದ್ದರಾಮಯ್ಯಗೆ ಅಸಮಾಧಾನಿತ ಬಿಜೆಪಿ ನಾಯಕನ ಕರೆ : ಕುತೂಹಲ ಸೃಷ್ಟಿಸಿದ ನಡೆ

By Kannadaprabha NewsFirst Published Aug 23, 2019, 8:14 AM IST
Highlights

ರಾಜ್ಯ ರಾಜಕೀಯದಲ್ಲಿ ವಿಚಾರವೊಂದು ಭಾರೀ ಸಂಚಲನ ಸೃಷ್ಟಿಸಿದೆ. ಅಸಮಾಧಾನಿತ ಬಿಜೆಪಿ ಶಾಸಕ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿ ಮಾತನಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು [ಆ.23]: ಸಚಿವ ಸ್ಥಾನ ವಂಚಿತರಾಗಿರುವ ಹಿರಿಯ ಬಿಜೆಪಿ ನಾಯಕ ಉಮೇಶ್‌ ಕತ್ತಿ ಅವರು ಗುರುವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾದ ಉಮೇಶ್‌ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಸಂಪುಟ ಸೇರ್ಪಡೆಯಾಗಲು ವಿಫಲರಾದ ನಂತರ ವಿವಿಧ ಪಕ್ಷಗಳ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜೆಡಿಎಸ್‌ನ ಬಸವರಾಜ ಹೊರಟ್ಟಿಅವರು ಕತ್ತಿ ಅವರನ್ನು ಇತ್ತೀಚೆಗಷ್ಟೇ ಭೇಟಿ ಮಾಡಿದ್ದರು. ಜೆಡಿಎಸ್‌ ವರಿಷ್ಠ ಕುಮಾರಸ್ವಾಮಿ ಹಾಗೂ ಕತ್ತಿ ಅವರ ನಡುವೆಯೂ ಮಾತುಕತೆ ನಡೆದಿದೆ ಎಂದು ಹೇಳಲಾಗಿತ್ತು.

ಪ್ಲೀಸ್ ಸ್ವಲ್ಪ ಸುಮ್ನಿರಿ: ಕತ್ತಿಗೆ ಹೈಕಮಾಂಡ್ ಮನವಿ!

ಇದೆಲ್ಲದರ ನಡುವೆ ಕತ್ತಿ ಅವರು ಗುರುವಾರ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಸಿದ್ದರಾಮಯ್ಯ ಅವರ ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದರು. ಮೂಲಗಳ ಪ್ರಕಾರ ಉಭಯ ನಾಯಕರ ದೂರವಾಣಿ ಮಾತುಕತೆ ಕೆಲವೇ ನಿಮಿಷ ನಡೆದಿದ್ದು, ಉಭಯಕುಶಲೋಪರಿಗೆ ಸೀಮಿತವಾಗಿತ್ತು ಎನ್ನಲಾಗಿದೆ. ಈ ವೇಳೆ ಕತ್ತಿ ಅವರು ಭೇಟಿ ಮಾಡುವ ಇಂಗಿತ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಅವರು ಸಂಜೆ ಬಂದು ಭೇಟಿಯಾಗುವಂತೆ ಸೂಚಿಸಿದರು ಎನ್ನಲಾಗಿದೆ. ಆದರೆ, ಕತ್ತಿ ಹಾಗೂ ಸಿದ್ದರಾಮಯ್ಯ ಅವರು ದೂರವಾಣಿ ಮಾತುಕತೆ ನಡೆಸಿದ್ದು ಮಾಧ್ಯಮಗಳಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ ಈ ಭೇಟಿ ಮುಂದಕ್ಕೆ ಹೋಗಿದೆ ಎನ್ನಲಾಗಿದೆ.

click me!