ಎಲ್ಲರೆದುರೆ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಬಿಜೆಪಿ ಶಾಸಕ-ಸಂಸದ!

Published : Mar 06, 2019, 09:56 PM ISTUpdated : Mar 06, 2019, 10:00 PM IST
ಎಲ್ಲರೆದುರೆ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಬಿಜೆಪಿ ಶಾಸಕ-ಸಂಸದ!

ಸಾರಾಂಶ

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಶಾಸಕ-ಸಂಸದ ನಡುವೆ ಜಟಾಪಟಿ| ಪರಸ್ಪರ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಕಮಲ ನಾಯಕರು| ರಸ್ತೆ ನಿರ್ಮಾಣದ ನಾಮಫಲಕದಲ್ಲಿ ಹೆಸರಿಲ್ಲದ ಕಾರಣಕ್ಕೆ ಜಗಳ| ಉತ್ತರಪ್ರದೇಶದ ಬಿಜೆಪಿ ಸಂಸದ ಶರದ್ ತ್ರಿಪಾಠಿ, ರಾಕೇಶ್​​ ಭಾಘೇಲ್ ನಡುವೆ ಹೊಡೆದಾಟ|

ಲಕ್ನೋ(ಮಾ.06): ಶಿಲಾನ್ಯಾಸ ಕಾರ್ಯಕ್ರಮದಲ್ಲಿ ತಮ್ಮ ಹೆಸರಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಿಜೆಪಿಯ ಶಾಸಕ ಮತ್ತು ಸಂಸದ ಪರಸ್ಪರ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶಲ್ಲಿ ನಡೆದಿದೆ.

ಸಂತ ಕಬೀರ್ ನಗರದ ರಸ್ತೆಯೊಂದರ ನಿರ್ಮಾಣಕ್ಕೆ ಸಂಬಂಧಿಸಿದಂತೆ, ನಾಮಫಲಕದಲ್ಲಿ ತಮ್ಮ ಹೆಸರಿಲ್ಲ ಎನ್ನುವ ಕಾರಣದಿಂದ ಆಕ್ರೋಶಗೊಂಡ ಬಿಜೆಪಿ ಸಂಸದ ಶರದ್ ತ್ರಿಪಾಠಿ ತಮ್ಮದೇ ಪಕ್ಷದ ಶಾಸಕರಾದ ರಾಕೇಶ್​​ ಭಾಘೇಲ್  ಮೇಲೆ ಹಲ್ಲೆ ಮಾಡಿದ್ದಾರೆ.

ಇಬ್ಬರೂ ನಾಯಕರ ನಡುವೆ ಮಾತಿಗೆ ಮಾತು ಬೆಳೆದು ಈ ವೇಳೆ ಸಂಸದ ತ್ರಿಪಾಠಿ ತಮ್ಮ ಬೂಟಿನಿಂದ ಶಾಸಕರನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಶಾಸಕ ರಾಕೇಶ್ ಕೂಡ ಸಂಸದರಿಗೆ ಥಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆಯಲ್ಲೇ ಈ ಕಿತ್ತಾಟ ನಡೆದಿದ್ದು, ಸಭೆಯಲ್ಲಿ ಹಲವಾರು ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಸದ್ಯ ಶಾಸಕ-ಸಂಸದರ ನಡುವಿನ ಜಟಾಪಟಿ ಬಿಜೆಪಿಗೆ ಭಾರೀ ಮುಜುಗರ ತಂದಿಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಳಿಗಾಲಕ್ಕಾಗಿಯೇ ವಿಶೇಷ ಬ್ರೇಕ್‌ಫಾಸ್ಟ್‌ ರೆಸಿಪಿ ತಿಳಿಸಿದ ಬಾಬಾ ರಾಮ್‌ದೇವ್‌, ಇದರಿಂದ ಇದೆ ಸಾಕಷ್ಟು ಪ್ರಯೋಜನ!
ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!