
ಕಲಬುರಗಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರ ಸಭೆಯ ವೇಳೆ ಎರಡು ಕಾರ್ಯಕರ್ತರ ಗುಂಪುಗಳ ನಡುವೆ ಪರಸ್ಪರ ಮಾರಾಮಾರಿ ನಡೆದಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕಲಬುರಗಿ ಉಸ್ತುವಾರಿ ಡಾ.ಲಕ್ಷ್ಮಣ ಸೇರಿ ಹಲವು ಮುಖಂಡರು ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದರು. ಈ ವೇಳೆ ಕೆಲವರು ಗ್ರಾಮೀಣ ಕಲಬುರಗಿಯಲ್ಲಿ ಬಿಜೆಪಿ ಮೂಲ ಹಾಗೂ ಹೊರಗಿನಿಂದ ಬಂದ ಕಾಯಕರ್ತರ ನಡುವಿನ ತಿಕ್ಕಾಟವನ್ನು ಪ್ರಸ್ತಾಪಿಸಿದರು. ಈ ವೇಳೆ ಮತ್ತೊಂದು ಗುಂಪು ವಿಷಯ ಪ್ರಸ್ತಾಪಿಸಿದವರ ವಿರುದ್ಧ ಹಲ್ಲೆಗೆ ಮುಂದಾಯಿತು.
ಇದರಿಂದ ಎರಡೂ ಗುಂಪುಗಳ ನಡುವೆ ಜಿಲ್ಲಾ ಉಸ್ತುವಾರಿಗಳ ಸಮ್ಮುಖದಲ್ಲೇ ಮಾರಾಮಾರಿ ನಡೆದಿದೆ. ಬಳಿಕ ಹಿರಿಯ ನಾಯಕ ರೇವೂನಾಯಕ್ ಬೆಳಮಗಿ ಮತ್ತಿತರರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ನಿಯಂತ್ರಿಸಿದ್ದಾರೆ.
ಮಾರಾಮಾರಿಯಲ್ಲಿ ಶಿವಲಿಂಗಪ್ಪ ತೆಂಗಳಿ ಉಪಳಾಂವ್ ಸೌಕಾರ ಅವರಿಗೆ ತೀವ್ರ ಗಾಯಗಳಾಗಿದ್ದು, ಜಯದೇಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮಹೇಶ್ ಔರಾದ್ ಸೇರಿ ಹಲವರಿಗೆ ಸಣ್ಣಪುಟ್ಟಗಾಯಗಳಾಗಿವೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.