
ಬೆಂಗಳೂರು[ಜು.12] : ಅತೃಪ್ತರ ರಾಜೀನಾಮೆ ವಿಚಾರದಲ್ಲಿ ಸ್ಪೀಕರ್ ನಡೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕವಾಗಿ ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಮಾಧುಸ್ವಾಮಿ, ಕೆ.ಎಸ್.ಈಶ್ವರಪ್ಪ ಮತ್ತಿತರರು ಸ್ಪೀಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಅತೃಪ್ತ ಶಾಸಕರು ಖುದ್ದು ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದೆ ಹಾಜರಾಗಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕರಿಸದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು.
ಇಲ್ಲವಾದಲ್ಲಿ ಪಕ್ಷ ಶುಕ್ರವಾರದಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಹೋರಾಟ ನಡೆಸಲಿದೆ. ಸದನವನ್ನು ಬಹಿಷ್ಕರಿಸದೆ, ‘ಬಹುಮತ ಇಲ್ಲದ ಸರ್ಕಾರದ ಚಳಿ ಜ್ವರ ಬಿಡಿಸುವ ಕೆಲಸ ಮಾಡಲಿದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.