
ಬೆಂಗಳೂರು: ಮುಂಬರುವ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಒಟ್ಟು 17 ಮಂದಿ ಸದಸ್ಯರಿದ್ದು, ಈಗಿನಿಂದಲೇ ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅಂಶಗಳ ಬಗ್ಗೆ ಸಮಾಲೋಚನೆ, ಪರಾಮರ್ಶೆ ಮತ್ತಿತರ ಪೂರ್ವ ಸಿದ್ಧತೆಯನ್ನು ಆರಂಭಿಸಲಿದ್ದಾರೆ.
ಈ ಸಮಿತಿಯಲ್ಲಿ ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಮದನಗೋಪಾಲ್ ಮತ್ತು ಸಿ.ಸೋಮಶೇಖರ್. ಈ ಪೈಕಿ ಸೋಮಶೇಖರ್ ಅವರು ಪಕ್ಷ ಸೇರ್ಪಡೆಯಾಗಿದ್ದಾರೆ. ಮದನಗೋಪಾಲ್ ಅವರು ಹಿತೈಷಿಯಾಗಿದ್ದಾರೆ.
ಪಕ್ಷದ ವಕ್ತಾರ ಎಸ್.ಸುರೇಶ್ ಕುಮಾರ್, ಶಾಸಕರಾದ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ರಾಮಚಂದ್ರಗೌಡ, ಕೆ.ಬಿ.ಶಾಣಪ್ಪ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಸಂಸದ ಶಿವಕುಮಾರ್ ಉದಾಸಿ, ಮಾಜಿ ಸಂಸದ ಜಿ.ಎಸ್.ಬಸವರಾಜು, ಸಹ ವಕ್ತಾರ ಡಾ.ವಾಮನಾಚಾರ್ಯ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಮಾಜಿ ಸಂಸದ ಜಯಪ್ರಕಾಶ್
ಹೆಗಡೆ, ಮುಖಂಡರಾದ ಗಣೇಶ್ ಯಾಜಿ, ಮದನಗೋಪಾಲ್, ಸಿ.ಸೋಮಶೇಖರ್, ಜಿ.ಎಸ್. ಹೆಗಡೆ ಮತ್ತು ರವೀಂದ್ರ ಪೈ ಸಮಿತಿಯಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.