ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ಇನ್ನೊಂದು ಚುನಾವಣೆಗೆ ಸಜ್ಜಾಗುತ್ತಿದೆ. ಇದೇ ವೇಳೆ ಬಿಜೆಪಿ ಆತಂಕವೊಂದು ಎದುರಾಗುವ ಸಾಧ್ಯತೆ ಇದೆ.
ಕಲಬುರಗಿ : ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಲಾಗಿದೆ. ಆದರೆ ಬಿಜೆಪಿ ಟಿಕೆಟ್ ವಿಚಾರದಲ್ಲಿ ಇದೀಗ ಬಿಜೆಪಿಹೆ ಚಿಂಚೋಳಿಯಲ್ಲಿ ಬಂಡಾಯದ ಭೀತಿ ಎದುರಾಗೊದೆ ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಭೀತಿ ಎದುರಾಗಿದೆ.
ಬಿಜೆಪಿ ಟಿಕೆಟ್ ಫೈನಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅಸಮಾಧಾನಗೊಂಡಿದ್ದು, ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ತಮ್ಮ ಆಪ್ತರೊಂದಿಗೆ ಸಭೆ ನಡೆಸಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ವಲ್ಯಾಪೂರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು ಈ ಬಗ್ಗೆ ಶನಿವಾರ ಸಂಜೆ ವೇಳೆಗೆ ತಮ್ಮ ನಿರ್ಧಾರ ಬಹಿರಂಗಗೊಳಿಸುವುದಾಗಿ ಸುವರ್ಣ ನ್ಯೂಸ್ . ಕಾಂ ಗೆ ಮಾಹಿತಿ ನೀಡಿದ್ದಾರೆ.