
ನವದೆಹಲಿ[ಜೂ.06]: 370ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿರುವ ಬೆನ್ನಲ್ಲೇ ಆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
370ನೇ ವಿಧಿ ರದ್ದತಿ ಬೆನ್ನಲ್ಲೇ ಕೇಂದ್ರ ಸರ್ಕಾರ 2011ರ ಜನಗಣತಿ ಆಧರಿಸಿ ಜಮ್ಮು- ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರ ಪುನರ್‌ವಿಂಗಡಣೆ ಮಾಡಲು ಉದ್ದೇಶಿಸಿದೆ. ಹಾಗಾದಲ್ಲಿ ಕಾಶ್ಮೀರದಲ್ಲಿನ ಕ್ಷೇತ್ರಗಳ ಸಂಖ್ಯೆ ಕುಗ್ಗಿಸಿ, ಜಮ್ಮು ಭಾಗದಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹೀಗಾದಲ್ಲಿ ಜಮ್ಮು-ಕಾಶ್ಮೀರದ ರಾಜಕೀಯ ಚಿತ್ರಣವೇ ಬದಲಾಗುವ ನಿರೀಕ್ಷೆ ಇದೆ. ಪೂರಕವಾದ ಪರಿಸ್ಥಿತಿ ಉದ್ಭವವಾದರೆ ಕಾಶ್ಮೀರ ಮೊದಲ ಬಾರಿಗೆ ಕಾಶ್ಮೀರೇತರ ಹಾಗೂ ಮುಸಲ್ಮಾನೇತರ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಕಾಣುವ ಸಾಧ್ಯತೆ ಇದೆ.
ಆಪರೇಷನ್ ಕಾಶ್ಮೀರ, ಆರ್ಟಿಕಲ್ 370 ರದ್ದು: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅವಿಭಜಿತ ಜಮ್ಮು-ಕಾಶ್ಮೀರದಲ್ಲಿ ಹಾಲಿ ಒಟ್ಟು 111 ಕ್ಷೇತ್ರಗಳು ಇವೆ. ಆದರೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ವಿಧಾನಸಭೆ ಕ್ಷೇತ್ರಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳುವಂತಿಲ್ಲ. ಹೀಗಾಗಿ ಜಮ್ಮು-ಕಾಶ್ಮೀರದ ವಿಧಾನಸಭೆಯ ಹಾಲಿ ಬಲ 87ರಷ್ಟಿದೆ. ಈ ಪೈಕಿ ಬಹುಮತಕ್ಕೆ 44 ಸ್ಥಾನಗಳು ಬೇಕಾಗಿದೆಯಾದರೂ, ಕಾಶ್ಮೀರ ಪ್ರಾಂತ್ಯವೊಂದರಲ್ಲೇ 46 ಸ್ಥಾನಗಳು ಇವೆ. ಹೀಗಾಗಿ ಪ್ರತಿ ಬಾರಿ ಕಾಶ್ಮೀರಿಗಳು, ಅದರಲ್ಲೂ ಮುಸ್ಲಿಮರೇ ಆ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.