
ಮುಂಬೈ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಮಾಡಿಕೊಳ್ಳುವಲ್ಲಿ ವಿಫಲವಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಹಾರಾಷ್ಟ್ರ ಬಿಜೆಪಿ ಹಿರಿಯ ಮುಖಂಡ ಚಂದ್ರಕಾಂತ್ ಪಾಟೀಲ್ ಎಚ್ಚರಿಕೆ ನಿಡಿದ್ದಾರೆ.
ಬಿಜೆಪಿ ಹಾಗೂ ಉದ್ದವ್ ಠಾಕ್ರೆ ನೇತೃತ್ವದ ಶಿವ ಸೇನೆಯೂ ಇಂದು ನಡೆಯುತ್ತಿರುವ ಪಹಲ್ಗಾರ್ ಉಪ ಚುನಾವಣೆಯ ಪ್ರಚಾರ ಕಾರ್ಯದ ವೇಳೆ ಪರಸ್ಪರ ವಾಗ್ದಾಳಿ ನಡೆಸಿಕೊಂಡಿದ್ದು ಇದೇ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.
ಸದ್ಯ ಕರ್ನಾಟಕದಲ್ಲಿಯೂ ಕೂಡ ಬಿಜೆಪಿ ಹೆಚ್ಚಿನ ಪಡೆದಾಗ್ಯೂ ಕೂಡ ಸರ್ಕಾರ ರಚನೆಯ ಅವಕಾಶವನ್ನು ಕಳೆದುಕೊಂಡಿದ್ದು, ಇದೇ ರೀತಿ ಮುಂದುವರಿದರೇ ಮಹಾರಾಷ್ಟ್ರದಲ್ಲಿಯೂ ಕೂಡ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆದ್ದರಿಂದ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.