ಜೈಲಿನಿಂದ ಬಿಜೆಪಿ ಶಾಸಕ ಬಿಡುಗಡೆ : ಬೆಂಬಲಿಗರ ಭವ್ಯ ಸ್ವಾಗತ

Published : Jul 01, 2019, 11:50 AM IST
ಜೈಲಿನಿಂದ ಬಿಜೆಪಿ ಶಾಸಕ ಬಿಡುಗಡೆ : ಬೆಂಬಲಿಗರ ಭವ್ಯ ಸ್ವಾಗತ

ಸಾರಾಂಶ

ಅಧಿಕಾರಿಗಳ ಮೇಲೆ ಮನ ಬಂದಂತೆ ಹಲ್ಲೆ ನಡೆಸಿ  ಜೈಲು ಸೇರಿದ್ದ ಬಿಜೆಪಿ ಶಾಸಕನ ಬಿಡುಗಡೆಯಾಗಿದ್ದು, ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. 

ಇಂಧೋರ್‌ [ಜು.1]: ಶಿಥಿಲಗೊಂಡಿದ್ದ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳ ಮೇಲೆ ಸಿಕ್ಸರ್‌ ಶೈಲಿಯಲ್ಲಿ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಆಕಾಶ್‌ ವಿಜಯ ವರ್ಗೀಯಾ ಜಾಮೀನಿನ ಮೇಲೆ ಭಾನುವಾರ ಬಿಡುಗಡೆಯಾಗಿದ್ದಾರೆ. 

ಆಕಾಶ್‌ ಬಿಡುಗಡೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಹಾಗೂ ಸಂಬಂಧಿಕರು ಆಕಾಶ್‌ ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನಿಸಿ ಭವ್ಯ ಸ್ವಾಗತ ಕೋರಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶಾಸಕ ಆಕಾಶ್‌, ‘ಪೊಲೀಸರ ಸಮ್ಮುಖದಲ್ಲೇ ಮಹಿಳೆಯೊಬ್ಬರನ್ನು ಅಮಾನವೀಯವಾಗಿ ಎಳೆದು ಹಾಕುತ್ತಿದ್ದರು. 

ಇದೇ ಕಾರಣಕ್ಕಾಗಿ ನಾನು ಹಲ್ಲೆ ಮಾಡಬೇಕಾಯಿತು. ಹಾಗಾಗಿ, ಈ ಬಗ್ಗೆ ನನಗೆ ನಾಚಿಕೆ ಅಥವಾ ಅಪರಾಧ ಭಾವನೆ ಇಲ್ಲ’ ಎಂದಿದ್ದಾರೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಬ್ಯಾಟ್‌ ಹಿಡಿಯುವ ಅಗತ್ಯ ಎದುರಾಗದೆ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್