
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಉಪ ಚುನಾವಣಾ ಕಣ ರಂಗೇರಿಗೆ. ವಿವಿಧ ಪಕಷಗಳ ಮುಖಂಡರು ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಕುಂದಗೋಳ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ವಿವಿಧ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
‘ಮೈತ್ರಿ ಬಣದಲ್ಲಿ 20 ಅತೃಪ್ತ ಶಾಸಕರು : ಬಿಜೆಪಿಗೆ ಹೆಚ್ಚಲಿದೆ ಸಂಖ್ಯಾಬಲ’
ಕುಂದಗೋಳದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಿಜೆಪಿ ಮುಖಂಡ ರೇಣುಕಾಚಾರ್ಯ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಡಿ.ಕೆ. ಶಿವಕುಮಾರ್ ಅಕ್ರಮ ಹಣದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ಹಣದಿಂದ ಚುನಾವಣೆ ಗೆಲ್ಲುತ್ತೇವೆ ಎನ್ನುವುದು ಸಾಧ್ಯವಿಲ್ಲ. ಕುಂದಗೋಳ ಮತದಾರರು ದುಡ್ಡಿಗೆ ಮಣಿಯುವುದಿಲ್ಲ ಎಂದರು.
ಶಿವಮೊಗ್ಗದಲ್ಲಿ ಡಿಕೆಶಿ ಆಟ ನಡೆಯಲ್ಲ. ಇಲ್ಲಿಗೆ ಬಂದು ಮೊಸಳೆ ಕಣ್ಣಿರು ಸುರಿಸುತ್ತಿದ್ದಾರೆ, ಮೇ 23 ರ ಯಡಿಯೂರಪ್ಪ ನೇತೃತ್ವದ ಸರ್ಕಾರ ಬರುವುದು ಖಚಿತ. ಮೈತ್ರಿ ಸರ್ಕಾರ ಉರುಳುವುದು ನಿಶ್ಚಿತ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.