
ಭೋಪಾಲ್ : ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್ ದೊರಕಿದೆ.
ಶೀಘ್ರದಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು ಈ ವೇಳೆ ಇಲ್ಲಿನ ಬಿಜೆಪಿ ಶಾಸಕ ಸಂಜಯ್ ಶರ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಸಂಜಯ್ ಶರ್ಮ ಕಾಂಗ್ರೆಸ್ ಸೇರಿದ್ದಾರೆ.
ನರಸಿಂಗ ಪುರ ಜಿಲ್ಲೆಯ ತೆಂಡುಕೇಡಾ ವಿಧಾನಸಭೆ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು.
ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾದಂತಾಗಿದೆ.
ಇನ್ನೇನು ಮಧ್ಯ ಪ್ರದೇಶದ ಚುನಾವಣೆ ಸಮೀಪ ಇರುವಾಗಲೇ ನಡೆದ ಈ ಬೆಳವಣಿಗೆ ಬಿಜೆಪಿಗೆ ಆಘಾತವನ್ನುಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.