ಸಚಿವ ರಮೇಶ್ ಜಾರಕಿಹೊಳಿ ಸಿಡಿಸಿದ ಹೊಸ ಬಾಂಬ್!

First Published Jun 30, 2018, 7:27 PM IST
Highlights

ಒಂದೆಡೆ ಮೈತ್ರಿ ಸರಕಾರದ ಆಯಸ್ಸಿನ ಬಗ್ಗೆ  ದಿನಕ್ಕೊಂದು ಮಾತು ಕೇಳಿಬರುತ್ತಿದೆ. ಅಮಿತ್ ಶಾ ಭೇಟಿ ಮಾಡಿದ್ದ ಬಿ.ಎಸ್.ಯಡಿಯೂರಪ್ಪ ಆಪರೇಶನ್ ಕಮಲಕ್ಕೆ ಕೈ ಹಾಕಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಈಗ ಅದೆಲ್ಲವನ್ನು ಮೀರಿಸುವ ಸುದ್ದಿಯನ್ನು ಸಚಿವರೊಬ್ಬರು ನೀಡಿದ್ದಾರೆ.
 

ಬೆಳಗಾವಿ[ಜೂ.30] ಕಾಂಗ್ರೆಸ್ನ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ಕೇಳಿದ ಸುದ್ದಿಗಾರರಿಗೆ ಸಚಿವ ರಮೇಶ್ ಜಾರಕಿಹೊಳಿ ಶಾಕ್ ನೀಡಿದ್ದಾರೆ. ಬಿಜೆಪಿ ಶಾಸಕರೆ ನಮ್ಮೊಂದಿಗೆ ಟಚ್ ನಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ಎಂ.ಬಿ.ಪಾಟೀಲ್ ಗೆ  ಸಚಿವ ಸ್ಥಾನ ಸಿಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ ಉತ್ತರ ಕರ್ನಾಟಕದ ನಾಯಕರೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಕು. ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥರಿದ್ದಾರೆ ಎಂದು ಪ್ರತಿಪಾದಿಸಿದರು.

ಮೈತ್ರಿ ಸರಕಾರವನ್ನು ಒಕ್ಕಲಿಗರ ಸರಕಾರ ಎಂದು ಕರೆಯುವುದು ಸರಿ ಅಲ್ಲ. ಎಲ್ಲ ಸಮುದಾಯದವರಿಗೂ ಪ್ರಾಧಾನ್ಯತೆ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು.

 

click me!