ದೆಹಲಿಗೂ NRC ಬೇಕೆಂದ ಮನೋಜ್ ತಿವಾರಿಗೆ ತಿವಿದ ಕಾಂಗ್ರೆಸ್!

Published : Aug 31, 2019, 06:49 PM IST
ದೆಹಲಿಗೂ NRC ಬೇಕೆಂದ ಮನೋಜ್ ತಿವಾರಿಗೆ ತಿವಿದ ಕಾಂಗ್ರೆಸ್!

ಸಾರಾಂಶ

ರಾಷ್ಟ್ರ ರಾಜಧಾನಿಗೂ NRC ವಿಸ್ತರಿಸಲು ಮನೋಜ್ ತಿವಾರಿ ಆಗ್ರಹ| ಈಶಾನ್ಯ ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ| ದೆಹಲಿಯಲ್ಲೂ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂದ ದೆಹಲಿ ಬಿಜೆಪಿ ಘಟಕ ಅಧ್ಯಕ್ಷ| ಅಕ್ರಮ ವಲಸಿಗರ ಸಮಸ್ಯೆ ಅಪಾಯದ ಹಂತ ತಲುಪಿದೆ ಎಂದ ಮನೋಜ್ ತಿವಾರಿ| ಮನೋಜ್ ಹೇಳಿಕೆ ಖಂಡಿಸಿದ  ದೆಹಲಿ ಮಹಿಳಾ ಕಾಂಗ್ರೆಸ್ ಘಟಕ| 

ನವದೆಹಲಿ(ಆ.31): ಅಸ್ಸಾಂನಲ್ಲಿ ನಡೆಸಲಾದ ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆಯನ್ನು ರಾಷ್ಟ್ರ ರಾಜಧಾನಿ ನವದೆಹಲಿಗೂ ಅನ್ವಯಿಸಬೇಕು ಎಂದು ಈಶಾನ್ಯ ದೆಹಲಿ ಬಿಜೆಪಿ ಸಂಸದ ಹಾಗೂ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ  ಮನೋಜ್ ತಿವಾರಿ ಆಗ್ರಹಿಸಿದ್ದಾರೆ.

ಈ ಕುರಿತು  ಮಾತನಾಡಿರುವ ಮನೋಜ್ ತಿವಾರಿ, ದೆಹಲಿಯಲ್ಲೂ ಪಾರ ಪ್ರಮಾಣದಲ್ಲಿ ಅಕ್ರಮ ವಲಸಿಗರು ನೆಲೆಸಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಅಪಾಯದ ಹಂತ ತಲುಪುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಮನೋಜ್ ತಿವಾರಿ ಹೇಳಿಕೆ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ.

ಈ ಮಧ್ಯೆ ಮನೋಜ್ ತಿವಾರಿ ಹೇಳಿಕೆಯನ್ನು ಖಂಡಿಸಿರುವ ದೆಹಲಿ ಮಹಿಳಾ ಕಾಂಗ್ರೆಸ್ ಘಟಕ, ದೆಹಲಿ ಮೂಲದವರೇ ಅಲ್ಲದ ಮನೋಜ್ ತಿವಾರಿ ಇಂತಹ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ