
ನವದೆಹಲಿ, [ಆ.26]: ಭೋಪಾಲ್ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಮತ್ತೆ ಸುದ್ದಿಯಲ್ಲಿದ್ದಾರೆ. ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರವೇ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಳೆದ ಒಂದು ತಿಂಗಳಲ್ಲೇ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಸಾವು ಸಂಭವಿಸಿದೆ. ಇದಕ್ಕೆಲ್ಲಾ ವಿಪಕ್ಷಗಳ ಮಾಟ ಮಂತ್ರ ಕಾರಣ. ಬಿಜೆಪಿ ವಿರುದ್ಧ ವಿಪಕ್ಷಗಳು ದುಷ್ಟ ಶಕ್ತಿಗಳ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಒಂದೇ ವರ್ಷದಲ್ಲಿ ಐವರು ಅತಿರಥ ಮಹಾರಥರನ್ನ ಕಳೆದುಕೊಂಡ ಬಿಜೆಪಿ
ನಿಮ್ಮ ಕೆಟ್ಟ ದಿನಗಳು ಶುರುವಾಗಿದ್ದು, ವಿರೋಧಪಕ್ಷಗಳು ಬಿಜೆಪಿ ಮೇಲೆ ದುಷ್ಟ ಶಕ್ತಿಯ ಪ್ರಯೋಗ ಮಾಡಲಿವೆ ಎಂದು ಈ ಹಿಂದೆ ಮಹಾರಾಜ್ ಜೀ ನನಗೆ ಹೇಳಿದ್ದರು. ಆದರೆ ಅದಕ್ಕೆ ನಾನು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ ನಮ್ಮ ಪಕ್ಷದ ಮಹಾನ್ ನಾಯಕರಿಬ್ಬರು ಸಾವನ್ನಪ್ಪಿದ ಮೇಲೆ ಅದರ ಬಗ್ಗೆ ನಾನು ಯೋಚಿಸಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.