
ಕೋಲ್ಕತಾ[ಆ17]: ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಕಾಂಪೌಂಡ್‌ವೊಂದಕ್ಕೆ ಡಿಕ್ಕಿ ಹೊಡೆಸಿದ ಸಂಬಂಧ ಬಿಜೆಪಿ ಸಂಸದೆಯೂ ಆಗಿರುವ ಬಂಗಾಳಿ ಚಿತ್ರ ನಟಿ ರೂಪಾ ಗಂಗೂಲಿ ಅವರ ಪುತ್ರನನ್ನು ಕೋಲ್ಕತಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ವೇಗವಾಗಿ ವಾಹನ ಚಾಲನೆ ಮಾಡಿ, ದಕ್ಷಿಣ ಕೋಲ್ಕತಾ ಕ್ಲಬ್‌ನ ಗೋಡೆಗೆ ಕಾರು ಡಿಕ್ಕಿ ಹೊಡೆಸಿ, ಆಸ್ತಿಗೆ ಹಾನಿ ಮಾಡಿದ ಸಂಬಂಧ ಆಕಾಶ್ ಮುಖರ್ಜಿ (21)ಯನ್ನು ಪೊಲೀಸರು ಗುರುವಾರ ರಾತ್ರಿ 9.15ರ ಸುಮಾರಿಗೆ ವಶಕ್ಕೆ ತೆಗೆದುಕೊಂಡು ಬಂಧಿಸಿದ್ದಾರೆ. ಆಕಾಶ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯ ಸೇವಿಸಿರುವುದು ದೃಢಪಟ್ಟಿದೆ. ವೇಗವಾಗಿ ಆಕಾಶ್ ಚಾಲನೆ ಮಾಡಿದ ಸಂದರ್ಭದಲ್ಲಿ ಹಲವು ಸಾರ್ವಜನಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಕಾರು ಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ಆಕಾಶ್ ಕಾರಿನಲ್ಲೇ ಬಂಧಿಯಾಗಿದ್ದರು. ಅವರ ತಂದೆ ಬಂದು ಹೊರಗೆಳೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.