ನೇರವಾಗಿ ಆರ್. ಅಶೋಕಗೆ ಪತ್ರ ಬರೆದ ಅಮಿತ್ ಶಾ

Published : Aug 01, 2019, 10:07 PM ISTUpdated : Aug 01, 2019, 10:20 PM IST
ನೇರವಾಗಿ ಆರ್. ಅಶೋಕಗೆ ಪತ್ರ ಬರೆದ ಅಮಿತ್ ಶಾ

ಸಾರಾಂಶ

ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನಾ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್​. ಅಶೋಕ್​ ಅವರ ಕಾರ್ಯಕ್ಕೆ ಶಾ ವಿಶೇಷ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು[ಆ. 01] ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಪಕ್ಷದವತಿಯಿಂದ ಗೌರವ ಅಭಿನಂದನೆ ಪತ್ರವನ್ನು ಬಿಜೆಪಿ. ನಾಯಕ ಆರ್. ಅಶೋಕ ಅವರನ್ನು ಉದ್ದೇಶಿಸಿ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

ಬಿಎಸ್‌ವೈ ದಿಟ್ಟ ನಿರ್ಧಾರದ ಹಿಂದೇನಿದೆ?

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಇದಕ್ಕೆ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತನ ಶ್ರಮ ಕಾರಣ ಎಂದು ಶ್ಲಾಘಿಸಿದ್ದಾರೆ.

ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಅಶೋಕ ಅವರಿಗೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ