ನನ್ನನ್ನೂ ಬಿಜೆಪಿಗೆ ಸೆಳೆವ ಯತ್ನ : ಜೆಡಿಎಸ್‌ ಶಾಸಕ

Published : Sep 18, 2018, 10:55 AM ISTUpdated : Sep 19, 2018, 09:28 AM IST
ನನ್ನನ್ನೂ ಬಿಜೆಪಿಗೆ ಸೆಳೆವ ಯತ್ನ : ಜೆಡಿಎಸ್‌ ಶಾಸಕ

ಸಾರಾಂಶ

ನನ್ನ ಪತ್ನಿಯ ಮೂಲಕ ನನ್ನನ್ನೂ ಸೆಳೆಯುವ ಯತ್ನ ನಡೆದಿದೆ. ಬಿಜೆಪಿ ಪತ್ನಿ ಮೂಲಕ ನನಗೆ ಆಫರ್ ಮಾಡಿದೆ ಎಂದು ಜೆಡಿಎಸ್ ಶಾಸಕ ಕುಮಾರಸ್ವಾಮಿ ಹೇಳಿದ್ದಾರೆ. 

ಸಕಲೇಶಪುರ: ನನ್ನ ಪತ್ನಿಯ ಮುಖಾಂತರ ನನ್ನನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಯತ್ನ ನಡೆದಿತ್ತು ಎಂದು ಸಕಲೇಶಪುರ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ತಮ್ಮ ಪತ್ನಿ ಚಂಚಲಾ ಕುಮಾರಸ್ವಾಮಿ ಜತೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಉದಯ್‌ಗೌಡ ಎಂಬುವರು ಮೊದಲಿಗೆ ನನ್ನ ಪತ್ನಿಯನ್ನು ಸಂಪರ್ಕಿಸಿ, ಮನೆಗೆ ಬಂದಿದ್ದರು. ಈ ವೇಳೆ ಜೆಡಿಎಸ್‌ ಪಕ್ಷದಲ್ಲೇ ಇದ್ದರೆ ನಿಮ್ಮ ಪತಿಗೆ ಸಚಿವ ಸ್ಥಾನ ಸಿಗುವುದಿಲ್ಲ. ಬಿಜೆಪಿಗೆ ಸೇರ್ಪಡೆಗೊಂಡರೆ ಅವರಿಗೆ ಸಚಿವ ಸ್ಥಾನ ನೀಡುತ್ತೇವೆ. 

ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಜಿ.ಪಂ. ಸದಸ್ಯೆಯೂ ಆಗಿರುವ ನನ್ನ ಪತ್ನಿ ಬಳಿ ಹೇಳಿದ್ದರು. ಇಲ್ಲ ನನ್ನ ಪತಿ ಪಕ್ಷ ತೊರೆಯುವುದಿಲ್ಲ ಎಂದಿದ್ದಕ್ಕೆ, ಕಾಂಗ್ರೆಸ್‌ನ 20 ಶಾಸಕರು ನಮ್ಮೊಡನೆ ಇದ್ದಾರೆ. ಈ ಬಗ್ಗೆ ಯೋಚಿಸಿ ನಿಮ್ಮ ನಿರ್ಧಾರ ತಿಳಿಸಿ ಎಂದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ